News Karnataka Kannada
Saturday, April 20 2024
Cricket
ಬೆಂಗಳೂರು ನಗರ

ಮುಖ್ಯಮಂತ್ರಿ ಯಾರೆಂಬುದು ನಿಗೂಢ, ಮೇ 18ರಂದು ಪ್ರಮಾಣವಚನ ಸಮಾರಂಭ

Siddu And Dkshi
Photo Credit : News Kannada

ಬೆಂಗಳೂರು: 135 ಸ್ಥಾನಗಳಲ್ಲಿ ಜಯಭೇರಿ ಸಾಧಿಸಿ ಅಧಿಕಾರ ಗದ್ದುಗೆ ಹಿಡಿಯಲು ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಯಾರು ಎಂಬುದರ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ. ಆದರೆ ಗುರುವಾರ ಮೇ 18ರಂದು ಪ್ರಮಾಣ ವಚನ ಸಮಾರಂಭ ನಡೆಯಲಿದೆ ಎಂಬ ಬಗ್ಗೆ ಮಾಹಿತಿ ದೊರೆತಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತೊಂದೆಡೆ ಸಿದ್ದರಾಮಯ್ಯ ಅವರು ಸಿಎಂ ಹುದ್ದೆಯ ರೇಸ್​ನಲ್ಲಿದ್ದಾರೆ. ಹೀಗಾಗಿ ಸಿಎಂ ಆಯ್ಕೆಗಾಗಿ ಎಐಸಿಸಿ, ಮೂವರು ವೀಕ್ಷಕರನ್ನು ನೇಮಿಸಿದೆ. ಸುಶೀಲ್​ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್​ ಹಾಗೂ ದೀಪಕ್ ಬಬಾರಿಯಾ ಅವರನ್ನು ವೀಕ್ಷಕರನ್ನಾಗಿ ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ.

ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಟ್ವೀಟ್ ಮಾಡಿದ್ದು ವೀಕ್ಷಕರಾಗಿ ಆಯ್ಕೆಯಾಗಿರುವ ಸುಶೀಲ್​ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್​ ಹಾಗೂ ದೀಪಕ್ ಬಬಾರಿಯಾ ಅವರು ಇಂದು(ಮೇ 14) ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಭಾಗವಹಿಸಲಿದ್ದು, ಇವರ ಸಮ್ಮುಖದಲ್ಲೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ ಎಂದಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು