News Kannada
Tuesday, May 30 2023
ಬೆಂಗಳೂರು

ಬೆಂಗಳೂರು: ತೆರಿಗೆ ವಸೂಲಿ ಮಾಡಿ ಗ್ಯಾರಂಟಿ ಯೋಜನೆ ಜಾರಿ – ಸಿದ್ದರಾಮಯಯ್ಯ

No one from THE BJP has fallen prey to terrorism, says Chief Minister Siddaramaiah
Photo Credit : News Kannada

ಬೆಂಗಳೂರು: ತೆರಿಗೆ ವಸೂಲಿ ಮಾಡಿ ಗ್ಯಾರಂಟಿ ಯೋಜನೆ ಜಾರಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 5 ಗ್ಯಾರಂಟಿ ಯೋಜನೆಗಳಿಗೆ ತಾತ್ವಿಕ ಒಪ್ಪಿಗೆ ದೊರೆತಿದೆ. ಮುಂದಿನ ಕ್ಯಾಬಿನೆಟ್‌ನಲ್ಲಿ ಈ ಬಗ್ಗೆ ಚರ್ಚೆ ನಡೆಸಿ ಯೋಜನೆ ರೂಪಿಸಿ ಅಧಿಕೃತವಾಗಿ ಜಾರಿಗೊಳಿಸಲಾಗುವುದು ಎಂದರು.

ಗೃಹ ಜ್ಯೋತಿ ಯೋಜನೆಯಡಿ ತಿಂಗಳಿಗೆ 200 ಯೂನಿಟ್ ಉಚಿತ​​ ವಿದ್ಯುತ್​ ನೀಡುತ್ತೇವೆ. ಇದಕ್ಕೆ ಸುಮಾರು ತಿಂಗಳಿಗೆ 1200 ಕೋಟಿ ರೂ. ಆಗಬಹುದು. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು 200 ರೂ. ಹಾಕಲಾಗುವುದು. ಅನ್ನ ಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ, ಈ ವರ್ಷದ ಪದವೀದರ, ಪಿಎಚ್​ಡಿ, ಎಂಬಿಬಿಎಸ್ ಪದವೀದರ ನಿರುದ್ಯೋಗಿಗಳಿಗೆ ಎರಡೂವರೆ ವರ್ಷಗಳ ವರೆಗೆ ತಿಂಗಳಿಗೆ ಮೂರು ಸಾವಿರ ರೂ. ನೀಡಲಾಗುವುದು.

ಈ ನಡುವೆ ಉದ್ಯೋಗ ಸಿಕ್ಕರೆ ಯುವ ನಿಧಿ ನೀಡಲಾಗುವುದಿಲ್ಲ. ಡಿಪ್ಲಮಾ ಪಾಸ್ ಮಾಡಿದ ನಿರುದ್ಯೋಗಿಗಳಿ ಒಂದೂವರೆ ಸಾವಿರ ರೂ., ಎಲ್ಲಾ ಸರ್ಕಾರಿ ಬಸ್​ನಲ್ಲಿ ಪ್ರಯಾಣಿಸುವ ಕರ್ನಾಟಕದ ಮಹಿಳೆಯರಿಗೆ ಫ್ರೀ ಪಾಸ್ ನೀಡಲಾಗುವುದು, ಬೇರೆ ರಾಜ್ಯಗಳ ಮಹಿಳೆಯರಿಗೆ ಈ ಭಾಗ್ಯ ಇರುವುದಿಲ್ಲ ಎಂದರು.

See also  ಚಾಮರಾಜನಗರ: ಕುರುಡನೊಬ್ಬನ ಮೇಲೆ ಆನೆ ದಾಳಿ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು