ಬೆಂಗಳೂರು: ನೂತನ ಕಾಂಗ್ರೆಸ್ ಸರ್ಕಾರದ ಮೊದಲ ರಾಜ್ಯ ಬಜೆಟ್ ಅಧಿವೇಶನ ಜುಲೈ 3 ರಿಂದ ಆರಂಭವಾಗಲಿದ್ದು, 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಆರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾಷಣ ಮಾಡಲಿದ್ದಾರೆ. ಜುಲೈ ಮೊದಲ ವಾರ ಬಜೆಟ್ ಅಧಿವೇಶನ ಕೈಗೊಳ್ಳಲು ನಿರ್ಧರಿಸಲಾಗಿದ್ದು ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಚರ್ಚೆ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.