ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ್, ರಣದೀಪ್ ಸುರ್ಜೇವಾಲ ಹಾಗೂ ಇತರರ ಉಪಸ್ಥಿತಿಯಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನೆರವೇರಿತು.
ಜತೆಗೆ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಛತ್ತೀಸ್ಗಢ ಸಿಎಂ ಭೂಪೇಶ್ ಬಘೇಲ್, ಬಿಹಾರ ಸಿಎಂ ನಿತೀಶ್, ಹಿಮಾಚಲಪ್ರದೇಶದ ಸಿಎಂ ಸುಖ್ವಿಂದರ್ ಸಿಂಗ್ ಸುಖು, ಪುದುಚೆರಿ ಸಿಎಂ ರಂಗಸ್ವಾಮಿ, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಹಾಗೂ ಇನ್ನೂ ಅನೇಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.