News Kannada
Monday, February 26 2024
ಬೆಂಗಳೂರು

ಬೆಂಗಳೂರು: ಇಂಡಿಯನ್ ಹಾತ್ ಫೆಸ್ಟಿವಲ್ ಗೆ ಚೈತ್ರಾ ವಾಸುದೇವನ್ ಅವರಿಂದ ಚಾಲನೆ

inaugurates Indian Haat Festival in Bengaluru
Photo Credit :

ಬೆಂಗಳೂರು: ಬೆಂಗಳೂರು ದಕ್ಷಿಣ ಭಾಗದ ಕಲಾಸಕ್ತರಿಗೆ ದೇಶದ ವಿವಿಧ ಭಾಗಗಳ 50 ಕ್ಕೂ ಹೆಚ್ಚು ಕರಕುಶಲ ಕರ್ಮಿಗಳು ತಯಾರಿಸಿದ ಉತ್ಪನ್ನಗಳನ್ನು ಪ್ರದರ್ಶನ ಮತ್ತು ಮಾರಾಟ ಮೇಳವಾದ “ಇಂಡಿಯನ್ ಹಾತ್ ಫೆಸ್ಟಿವಲ್“ ಗೆ ಚಿತ್ರನಟಿ ಮತ್ತು ರೂಪದರ್ಶಿ ಚೈತ್ರಾ ವಾಸುದೇವನ್ ಚಾಲನೆ ನೀಡಿದರು.

ಹೆಚ್ಎಸ್ಆರ್ ಲೆಔಟ್ ನ ವೈಟ್ ಹೌಸ್ ಕನ್ವೆಕ್ಷನ್ ಸೆಂಟರ್ ನಲ್ಲಿ ಜೂನ್ 29 ರಿಂದ ಇಂಡಿಯನ್ ಹಾತ್ ಫೆಸ್ಟಿವಲ್ ಆರಂಬವಾಗಿದ್ದು, ಜುಲೈ 3 ರವರೆಗೆ ನಡೆಯಲಿದೆ. ಪ್ರತಿದಿನ ಬೆಳಿಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ನಡೆಯುತ್ತಿದ್ದು, ಸಾರ್ವಜನಿಕರಿಗೆ ಪ್ರವೇಶ ಕಲ್ಪಿಸಲಾಗಿದೆ.

ಮೇಳವನ್ನು ಉದ್ಘಾಟಿಸಿ ಮಾತನಾಡಿದ ಚೈತ್ರಾ ವಾಸುದೇವನ್ ಅವರು, ಇಲ್ಲಿ ಭಾರತದ ಕಲೆ ಮತ್ತು ಸಂಸ್ಕೃತಿಯನ್ನು ಬಿಂಬಿಸುವಂತಹ ಉತ್ಪನ್ನಗಳನ್ನು ನಮ್ಮ ಕುಶಲಕರ್ಮಿಗಳು ತಯಾರಿಸಿದ್ದಾರೆ. ಒಂದಕ್ಕಿಂತ ಒಂದು ಉತ್ಪನ್ನ ಕಲಾಸಕ್ತರನ್ನು ಆಕರ್ಷಿಸುತ್ತದೆ. ದೇಶದ ವಿವಿಧ ರಾಜ್ಯಗಳ ಕುಶಲಕರ್ಮಿಗಳು, ಕಲಾವಿದರು ತಯಾರಿಸಿರುವ ಕಲಾಕೃತಿಗಳನ್ನು ನೇರವಾಗಿ ಜನರ ಕೈಗೆ ತಲುಪಿಸಲಾಗುತ್ತಿದೆ ಎಂದರು.

ಈ ಮೇಳದಲ್ಲಿ 75 ಕ್ಕೂ ಹೆಚ್ಚು ಮಳಿಗೆಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನ ಮಾಡುತ್ತಿದ್ದಾರೆ.  ನಿಮ್ಮ ಮನೆಯ ಗಾರ್ಡನ್ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್ ಲೂಮ್ ಸ್ಯಾರಿಯನ್ನು ಸೆಲೆಕ್ಟ್ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿದೆ.

ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ. ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಗೆಂದು ಆಭರಣಗಳು, ಬೆಡ್ ಲೈನೆನ್, ಕಲಾಕೃತಿಗಳು, ಪೀಠೋಪಕರಣಗಳು, ಮ್ಯಾಟ್ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿವೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 6364685716 – 90366 58774

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು