ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿಯ ಪ್ರಬಲ ನಾಯಕ, ಮಾಜಿ ಸಚಿವ ಕೆ.ಸುಧಾಕರ್ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದು ಭರ್ಜರಿ ಗೆಲುವು ದಾಖಲಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಪ್ರದೀಪ್ ಈಶ್ವರ್ಗೆ ಇಂದು ಮಾತೃವಿಯೋಗ ಆಗಿದೆ.
ಪ್ರದೀಪ್ ಈಶ್ವರ್ ಅವರ ಸಾಕು ತಾಯಿ ರತ್ನಮ್ಮ ಅವರು ತುಂಬಾ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು (ಮೇ 20) ಬೆಳಗ್ಗೆ ಪೇರೇಸಂದ್ರ ಗ್ರಾಮದಲ್ಲಿ ರತ್ಮಮ್ಮ (72) ಕೊನೆಯುಸಿರೆಳೆದಿದ್ದಾರೆ. ಸಿದ್ದರಾಮಯ್ಯ ಪ್ರಮಾಣ ವಚನ ಕ್ರಾರ್ಯಕ್ರಮದಲ್ಲಿ ಭಾಗಿಯಾಗಲು ಬೆಂಗಳೂರಿಗೆ ಬಂದಿದ್ದ ಪ್ರದೀಪ್ ಈಶ್ವರ್ ಸಾಕು ತಾಯಿ ಇನ್ನಿಲ್ಲ ಎಂಬ ಸುದ್ದಿ ತಿಳಿಯುತ್ತಿದ್ದಂತೆ ವಾಪಸ್ ಪೇರೇಸಂದ್ರ ಗ್ರಾಮಕ್ಕೆ ಮರಳಿದ್ದಾರೆ.