News Kannada
Thursday, December 01 2022

ಚಿತ್ರದುರ್ಗ

ನಿಧಾನವಾಗಿ ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಇನ್ನೋವಾ ಕಾರು

Photo Credit :

ಚಿತ್ರದುರ್ಗ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸೀಬಾರ ಬಳಿ ನಿಧಾನವಾಗಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ಇನ್ನೋವಾ ಕಾರು ಢಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟು, ಒಬ್ಬರು ಗಾಯಗೊಂಡಿರುವ ಘಟನೆ  ನಡೆದಿದೆ.

ಮೃತರನ್ನು ಬೆಂಗಳೂರಿನ ವೈಟ್ ಫೀಲ್ಡ್ ನಿವಾಸಿಗಳಾದ ಶಿವರಾಮ್ (45 ವರ್ಷ) ಹಾಗೂ ಚೇತನ್ ಕುಮಾರ್ (30 ವರ್ಷ) ಎಂದು ಗುರುತಿಸಲಾಗಿದೆ.

ಗಾಯಳು ಸ್ವಾಮಿ ಎಂಬುವವರು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶುಕ್ರವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸೀಬಾರ ಬಳಿ ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆಗೆ ಟಯರ್ ಪಂಕ್ಚರ್ ಆಗಿದ್ದ ಲಾರಿಯೊಂದು ನಿಧಾನವಾಗಿ ಚಲಿಸುತ್ತಿತ್ತು. ಇದೇ ಸಮಯದಲ್ಲಿ ದಾವಣಗೆರೆ ಕಡೆಯಿಂದ ವೇಗವಾಗಿ ಬಂದ ಇನ್ನೋವಾ ಕಾರು ಲಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೂರು ಜನ ಗೋವಾಕ್ಕೆ ಹೋಗಿ ಬೆಂಗಳೂರಿಗೆ ಹಿಂತಿರುಗುತ್ತಿದ್ದ ವೇಳೆ ಭೀಕರ ಅವಘಡ ಸಂಭವಿಸಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

See also  ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಟೆಂಪೊ ಟ್ರಾವೆಲರ್‌; ಇಬ್ಬರು ಸಾವು, 9 ಮಂದಿಗೆ ಗಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು