News Kannada
Sunday, September 25 2022

ಚಿತ್ರದುರ್ಗ

ಮುರುಘಾ ಮಠಕ್ಕೆ ನೂತನ ಉತ್ತರಾಧಿಕಾರಿ ನೇಮಕ - 1 min read

Photo Credit :

ಚಿತ್ರದುರ್ಗ: ಹಿಂದುಳಿದ ಮಠಗಳಲ್ಲಿ ಒಂದಾಗಿರುವ ಕೋಟೆನಾಡು ಚಿತ್ರದುರ್ಗ ಮುರುಘಾ ಮಠದ ಪೀಠಾಧ್ಯಕ್ಷರಾದ ಡಾ. ಶಿವಮೂರ್ತಿ ಮುರುಘಾ ಶರಣರು ಕ್ರಾಂತಿಕಾರಿ ನಿರ್ಧಾರ ಕೈಗೊಂಡಿದ್ದು, ಶ್ರೀಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಸ್ವಾಮೀಜಿ ಅವರನ್ನು ನೇಮಕ ಮಾಡಲಾಗಿದೆ.

ಚಿತ್ರದುರ್ಗ ನಗರದ ಮುರುಘಾ ಮಠದ ಶಿರಸಂಗಿ ಮಹಾಲಿಂಗ ಸ್ವಾಮಿ ಸಭಾಂಗಣದಲ್ಲಿ ಶುಕ್ರವಾರ ನೂರಾರು ಭಕ್ತರ ಸಮ್ಮುಖದಲ್ಲಿ ಶ್ರೀಮಠದ ಉತ್ತರಾಧಿಕಾರಿಯ ಹೆಸರನ್ನು ಡಾ.ಮುರುಘಾ ಶರಣರು ಘೋಷಿಸಿದರು. ನೂತನ ಉತ್ತರಾಧಿಕಾರಿ ಬಸವಾದಿತ್ಯ ಸ್ವಾಮೀಜಿ ಅವರ ಹಣೆಗೆ ಮುರುಘಾ ಶ್ರೀಗಳು ವಿಭೂತಿ ಇಟ್ಟು, ರುದ್ರಾಕ್ಷಿ ಮಾಲೆ ಹಾಕುವ ಮೂಲಕ ಹೆಸರು ಘೋಷಿಸುತ್ತಿದ್ದಂತೆ ಭಕ್ತರೆಲ್ಲರೂ ನೂತನ ಉತ್ತರಾಧಿಕಾರಿ ಶ್ರೀಗಳಿಗೆ ಹೂವಿನ ಸುರಿ ಮಳೆ ಸುರಿಸಿದರು.

ನೂತನ ಉತ್ತರಾಧಿಕಾರಿ ಘೋಷಣೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮುರುಘಾ ಶ್ರೀಗಳು, ಇದು ಆತುರದ ನಿರ್ಧಾರವಲ್ಲ. ಒಂದು ವರ್ಷದ ಹಿಂದೆಯೇ ಉತ್ತರಾಧಿಕಾರಿ ಘೋಷಣೆ ಬಗ್ಗೆ ನಿರ್ಧರಿಸಲಾಗಿತ್ತು. ಈಗಿನ ಬಸವಾದಿತ್ಯ ಸ್ವಾಮೀಜಿ ಅವರ ಪೂರ್ವಶ್ರಮದ ತಂದೆ-ತಾಯಿ ಚಿತ್ರದುರ್ಗ ಹುಲ್ಲೂರು ಗ್ರಾಮದ ಶಿವಮೂರ್ತಯ್ಯ ಮತ್ತು ಚಂದ್ರಕಲಾ. ಚಿತ್ರದುರ್ಗ ನಗರದ ಎಸ್​ಜೆಎಂ ಸ್ವಾತಂತ್ರ್ಯ ಕಾಲೇಜಿನಲ್ಲಿ ಬಸವಾದಿತ್ಯ ಸ್ವಾಮಿ ವ್ಯಾಸಂಗ ಮಾಡುತ್ತಿದ್ದರು ಎಂದರು.

ಶ್ರೀ ಬಸವಾದಿತ್ಯ ಸ್ವಾಮೀಜಿ ಮಾತನಾಡಿ, ನನಗೆ ಚಿಕ್ಕ ವಯಸ್ಸಿನಲ್ಲೇ ಮಠದ ಜವಾಬ್ದಾರಿ ನೀಡಿದ್ದಾರೆ. ಶ್ರೀಮಠವನ್ನು ಮತ್ತಷ್ಟು ಅಭಿವೃದ್ಧಿಯತ್ತ ಕೊಂಡೊಯ್ಯುಲಾಗುವುದು ಎಂದು ಹೇಳಿದರು.

See also  ಚಿತ್ರದುರ್ಗ: ಯುವಕರ ಕಿರುಕುಳದಿಂದ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು