News Kannada
Tuesday, May 30 2023
ಚಿತ್ರದುರ್ಗ

ಸುಳ್ಳಿನ ಗ್ಯಾರೆಂಟಿಗಳನ್ನು ನಂಬಬೇಡಿ: ಚಿತ್ರದುರ್ಗದಲ್ಲಿ ಕಾಂಗ್ರೆಸ್‌ ವಿರುದ್ಧ ಮೋದಿ ವಾಗ್ದಾಳಿ

Air show is a symbol of country's progress: PM Narendra Modi
Photo Credit : News Kannada

ಚಿತ್ರದುರ್ಗ: ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬರುವುದಿಲ್ಲವೆಂದು ಸ್ವತಃ ಕಾಂಗ್ರೆಸ್​ ನಾಯಕರಿಗೆ ಗೊತ್ತಿದೆ. ಹೀಗಾಗಿ ಸುಳ್ಳಿನ ಗ್ಯಾರೆಂಟಿಗಳನ್ನು ನೀಡುತ್ತಿದೆ. ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಬಿಜೆಪಿಯ ಎಲ್ಲ ಯೋಜನೆಗಳನ್ನು ನಾಶ ಮಾಡುತ್ತವೆ. ಮೇ 10 ರಂದು ಕಮಲದ ಗುರುತಿಗೆ ಮತ ಹಾಕಿ. ಈ ಬಾರಿ ಬಹುಮತದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕೋಟೆ ನಾಡು ಚಿತ್ರದುರ್ಗದಲ್ಲಿ ಸಾರ್ವಜನಿಕ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಆಂತಕವಾದಿಗಳ ತುಷ್ಟಿಕರಣ
ಕಾಂಗ್ರೆಸ್​ ನಿಜಲಿಂಗಪ್ಪ ಅವರಿಗೆ ಅಪಮಾನ ಮಾಡಿದೆ. ಕಾಂಗ್ರೆಸ್ ಸಮಾಜದ ಜನರಲ್ಲಿ ಆಂತಕ ಸೃಷ್ಟಿಸಿದೆ. ಕಾಂಗ್ರೆಸ್​ ನನಗೆ 90ಕ್ಕೂ ಹೆಚ್ಚು ಬಾರಿ ನಿಂದನೆ ಮಾಡಿದೆ. ಕಾಂಗ್ರೆಸ್​ ಮೊದಲಿನಿಂದಲೂ ಆಂತಕವಾದಿಗಳ ತುಷ್ಟಿಕರಣ ಮಾಡುತ್ತಿದೆ. ಆತಂಕವಾದಿಗಳು ಸತ್ತಾಗ ಕಾಂಗ್ರೆಸ್​ ನಾಯಕರು ಕಣ್ಣೀರು ಹಾಕಿದ್ದರು. ರಾಜ್ಯದಲ್ಲೂ ಕಾಂಗ್ರೆಸ್​ ನಾಯಕರು ಆತಂಕವಾದಿಗಳ ಬೆಂಬಲಿಗೆ ನಿಲ್ಲುತ್ತದೆ ಎಂದರು.

ಬಡವರ ಮಕ್ಕಳ ಶಿಕ್ಷಣಕ್ಕೆ ಆದ್ಯತೆ
ಕಾಂಗ್ರೆಸ್​ ಯಾವತ್ತು ಕೂಡ ಬಿಜೆಪಿಯ ಅಭಿವೃದ್ಧಿ ಬಗ್ಗೆ ಕಲ್ಪನೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಬಿಜೆಪಿ ಸರ್ಕಾರ ಕೇವಲ 9 ವರ್ಷಗಳಲ್ಲಿ ಸಾಕಷ್ಟು ಮೆಡಿಕಲ್​ ಕಾಲೇಜು ಆರಂಭಿಸಿದೆ. ಚಿತ್ರದುರ್ಗದಲ್ಲೂ ಕೂಡ ಮೆಡಿಕಲ್​​ ಕಾಲೇಜ್​ ಆರಂಭಿಸಿದೆ. ಕೇಂದ್ರ ಸರ್ಕಾರದಿಂದ ನರ್ಸಿಂಗ್​ ಕಾಲೇಜ್​ ಆರಂಭಿಸಲಾಗಿದೆ ಎಂದು ಮೋದಿ ಹೇಳಿದರು. ಬಿಜೆಪಿ ಸರ್ಕಾರ ಬಡವರ ಮಕ್ಕಳಿಗಾಗಿ ಮೆಡಿಕಲ್​ ಕಾಲೇಜಿನ ಮತ್ತು ಇಂಜನಿಯರಿಂಗ್​ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯುವಂತೆ ವ್ಯವಸ್ಥೆ ಮಾಡುತ್ತಿದ್ದೇವೆ. ಇದರಿಂದ ಗ್ರಾಮೀಣ ಮಕ್ಕಳಿಗೆ ಅನುಕೂಲವಾಗುತ್ತದೆ. ರೈತರ ಮಕ್ಕಳಿಗೆ ರೈತ ನಿಧಿ ಯೋಜನೆ ಜಾರಿಗೆ ತಂದಿದ್ದೇವೆ. ಆದಿವಾಸಿ ಮಕ್ಕಳಿಗಾಗಿ 400ಕ್ಕೂ ಹೆಚ್ಚು ಏಕಲವ್ಯ ಶಾಲೆಗಳನ್ನು ಆರಂಭಿಸಿದ್ದೇವೆ. ಆದಿವಾಸಿಗಳ ವಿಕಾಸಕ್ಕೆ ಬಜೆಟ್​ನಲ್ಲಿ ಒಂದು ಕಾಲು ಲಕ್ಷ ಕೋಟಿ ರೂ. ಹಣ ಮೀಸಲಿಟ್ಟಿದ್ದೇವೆ ಎಂದರು.

ಅಭಿವೃದ್ಧಿಗೆ ವೇಗ
ಕಾಂಗ್ರೆಸ್​ ಮತ್ತು ಜೆಡಿಎಸ್​ ಆಡಳಿತದಲ್ಲಿ ಯೋಜನೆಗಳು ನಿಧಾನಗತಿಯಲ್ಲಿ ನಡೆಯುತ್ತಿತ್ತು. ಡಬಲ್​ ಇಂಜಿನ್​ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರೈಲು, ರಸ್ತೆ, ವಿಮಾನ ನಿಲ್ದಾಣ​​ ನಿರ್ಮಾಣಕ್ಕೆ ವೇಗ ನೀಡಿದ್ದೇವೆ. ಕರ್ನಾಟಕದಲ್ಲಿ 9 ಕೈಗಾರಿಕಾ ಪ್ರದೇಶ ಸ್ಥಾಪಿಸುತ್ತೇವೆ. ಚಿತ್ರದುರ್ಗದಲ್ಲೂ 1 ಕೈಗಾರಿಕಾ ಪ್ರದೇಶ ಸ್ಥಾಪನೆ ಮಾಡುತ್ತೇವೆ. ಇದರಿಂದ ಯುವಕರಿಗೆ ಕೆಲಸ ದೊರೆಯುತ್ತದೆ ಎಂದು ಮೋದಿ ತಿಳಿಸಿದರು.

See also  ಚಿತ್ರದುರ್ಗ : ಸಂಪದ್ಭರಿತ ಕರ್ನಾಟಕ ನಿರ್ಮಾಣಕ್ಕೆ ಸಂಕಲ್ಪ -ಸಿಎಂ ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು