News Kannada
Saturday, June 03 2023
ಬೆಂಗಳೂರು

ಬೆಂಗಳೂರು: ಇಂದು(ಮೇ 14) ಸಂಜೆ 5.30ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

Vijayapura: Three sitting MLAs confirmed of hand tickets, rest uncertain
Photo Credit : News Kannada

ಬೆಂಗಳೂರು: ಕಾಂಗ್ರೆಸ್​ ಗೆದ್ದ ಬೆನ್ನಲ್ಲೇ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಬಗ್ಗೆ ಚರ್ಚೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಇಂದು(ಮೇ 14) ಸಂಜೆ 5.30ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

ಈ ಸಭೆಯಲ್ಲಿ ವೀಕ್ಷಕರ ಸಮ್ಮುಖದಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ರೇಸ್​​ನಲ್ಲಿದ್ದಾರೆ. ಇನ್ನು ಇವರರಿಬ್ಬರ ಮಧ್ಯೆ ಡಾ. ಪರಮೇಶ್ವರ್​ ಸಹ ಒಳಗಿಂದೊಳಗೇ ಕಸರತ್ತು ನಡೆಸಿದ್ದಾರೆ.

ಕುರಿತಂತೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಮಾಹಿತಿ ನೀಡಿದ್ದು, ಕಾಂಗ್ರೆಸ್​ ಶಾಸಕಾಂಗ ಪಕ್ಷದ ಮೊದಲ ಸಭೆಯನ್ನು ಭಾನುವಾರ(ಮೇ 14) ಸಂಜೆ 5.30ಕ್ಕೆ ಕರೆಯಲಾಗಿದೆ ಎಂದಿದ್ದಾರೆ.

ಹೀಗಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಯಾರು ಆಗುತ್ತಾರೆ? ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.

See also  ಇಸ್ಲಾಮಾಬಾದ್: ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು