ದಾವಣಗೆರೆ :ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಇಂದು ಜಿಲ್ಲೆಯ ಅಂಗನವಾಡಿ ಮತ್ತು 1 ರಿಂದ 10 ನೇ ತರಗತಿವರೆಗೆ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮಕ್ಕಳ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ದಾವಣಗೆರೆ ಜಿಲ್ಲೆಯ ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನ ರಹಿತ ಕಿರಿಯ/ಹಿರಿಯ ಪ್ರಾಥಮಿಕ ಪ್ರೌಢಶಾಲೆಗಳು ಮತ್ತು ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಇಂದು ರಜೆ ಘೋಷಿಸಲಾಗಿದೆ.
ರಜೆ ಘೋಷಣೆ ಮಾಡಿದ ದಿನಗಳ ಶೈಕ್ಷಣಿಕ ಚಟುವಟಿಕೆಗಳನ್ನು ಮುಂದಿನ ದಿನಗಳಲ್ಲಿ ಸರಿದೂಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.