News Kannada
Tuesday, December 06 2022

ದಾವಣಗೆರೆ

ಮದುವೆಗೆ ನಿರಾಕರಿಸಿದ್ದಕ್ಕೆ ಪ್ರೇಮಿಸಿದ ಯುವಕನ ಆತ್ಮಹತ್ಯೆ

Photo Credit :

ದಾವಣಗೆರೆ: ತಾನು ಪ್ರೀತಿಸುತಿದ್ದ ಹುಡುಗಿ ಮದುವೆ ನಿರಾಕರಿಸಿ ಬೇರೊಬ್ಬನ ಜತೆ ವಿವಾಹ ಆಗುವುದಕ್ಕೆ ಮುಂದಾಗಿದ್ದಕ್ಕೆ ಪ್ರೇಮಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕರೂರು ಕೈಗಾರಿಕಾ ಪ್ರದೇಶದ ಬಳಿಯ ರೈಲ್ವೆ ಟ್ರ್ಯಾಕ್ ಬಳಿ ನಡೆದಿದೆ.
ನಗರದ ಎಚ್‍ಕೆಆರ್ ವೃತ್ತದ ಲೆನಿನ್‍ನಗರದ ಹೊಸ ಬಡಾವಣೆ ನಿವಾಸಿ ಮಹಾಂತೇಶ್ (24) ಅತ್ಮಹತ್ಯೆ ಮಾಡಿಕೊಂಡ ಯುವಕ. ಕಳೆದ ಹಲವು ವರ್ಷಗಳಿಂದ ಕರೂರು ಕೈಗಾರಿಕಾ ಪ್ರದೇಶದಲ್ಲಿನ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಾಂತೇಶ್, ಕುಟುಂಬಕ್ಕೆ ಆಧಾರವಾಗಿದ್ದ. ಇದೇ ಗಾರ್ಮೆಂಟ್ಸ್ ನಲ್ಲಿನ ಯುವತಿಯೊಬ್ಬಳ ಪರಿಚಯವಾಗಿ, ಬಳಿಕ ಪ್ರೇಮಕ್ಕೆ ತಿರುಗಿದ್ದು, ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ.
ಕೆಲ ದಿನಗಳಿಂದ ಯುವತಿ ಮದುವೆಗೆ ನಿರಾಕರಿಸಿದ್ದು, ಬೇರೆ ಯುವಕನ ಜೊತೆ ನಿಶ್ಚಿತಾರ್ಥವಾಗಿದೆ ಎಂದು ತಿಳಿದುಬಂದಿದೆ. ಇದರಿಂದ ಮಾನಸಿಕವಾಗಿ ಕುಗ್ಗಿದ ಮಹಾಂತೇಶ್, ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೂ ಮುನ್ನ ‘ನನ್ನ ಸಾವಿಗೆ ನಾನು ಪ್ರೀತಿಸಿದ ಹುಡುಗಿಯೇ ಕಾರಣ’, ಅಕ್ಕ ನಿಮ್ಮನ್ನು ಬಿಟ್ಟು ಹೋಗುತ್ತಿದ್ದೇನೆ ಕ್ಷಮಿಸಿ ಎಂದು ವಾಟ್ಸಪ್ ನಲ್ಲಿ ಸ್ಟೇಟಸ್‍ಗೆ ಹಾಕಿ, ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

See also  ಜನ ಮೋದಿಯನ್ನು ಸೋಲಿಸುತ್ತಾರೆ: ಸುಧೀಂದ್ರ ಕುಲಕರ್ಣಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು