NewsKarnataka
Sunday, November 28 2021

ದಾವಣಗೆರೆ

ಪಿಸ್ತೂಲ್‌ ಸ್ವಚ್ಛಗೊಳಿಸುವ ಸಂದರ್ಭ ಆಕಸ್ಮಿಕವಾಗಿ ಗುಂಡು ತಗುಲಿ ಕಾನ್‌ಸ್ಟೆಬಲ್ ಸಾವು

ದಾವಣಗೆರೆ: ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆವರಣದಲ್ಲಿ ಸೋಮವಾರ ಪಿಸ್ತೂಲ್‌ ಸ್ವಚ್ಛಗೊಳಿಸುವ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಸಶಸ್ತ್ರ ಮೀಸಲು ಪಡೆಯ ಕಾನ್‌ಸ್ಟೆಬಲ್ ಮೃತಪಟ್ಟಿದ್ದಾರೆ. ಚೇತನ್‌ ಅವರು ಪತ್ನಿ, ಪುತ್ರನನ್ನು ಅಗಲಿದ್ದಾರೆ.

ಚೇತನ್ (28) ಮೃತಪಟ್ಟ ಪೊಲೀಸ್ ಕಾನ್‌ಸ್ಟೆಬಲ್. ಬೆಳಿಗ್ಗೆಯ ತರಬೇತಿ ಮುಗಿಸಿ ಆಯುಧ ಸ್ವಚ್ಛಗೊಳಿಸುತ್ತಿದ್ದ ವೇಳೆ ಪಿಸ್ತೂಲ್‌ನಿಂದ ಆಕಸ್ಮಿಕವಾಗಿ ಗುಂಡು ತಗುಲಿದೆ.

ಕೂಡಲೇ ಅವರನ್ನು ನಗರದ ಸಿಟಿ ಸೆಂಟ್ರಲ್ ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯೆ ಮೃತಪಟ್ಟರು. ಚೇತನ್ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಮಲಹಾಳ್ ಗ್ರಾಮದ ನಿವಾಸಿ. 2012ರಲ್ಲಿ ದಾವಣಗೆರೆ ಜಿಲ್ಲಾ ಸಶಸ್ತ್ರ ಮೀಸಲು ಪಡೆಗೆ ಸೇರಿದ್ದರು.

ಇಲಾಖೆಯಿಂದ ಚೇತನ್‌ ಕುಟುಂಬಕ್ಕೆ ಅಗತ್ಯ ನೆರವು ನೀಡಲಾಗುವುದು ಎಂದು ಪೂರ್ವ ವಲಯ ಐಜಿಪಿ ಎಸ್ ರವಿ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!