ದಾವಣಗೆರೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಸೆ.2ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ತಿಳಿಸಿದರು.
ಹರಿಹರ ತಾಲ್ಲೂಕಿನ ಕೊಂಡಜ್ಜಿ ಗ್ರಾಮದಲ್ಲಿ ನಿರ್ಮಾಣವಾದ ಪೊಲೀಸ್ ವಸತಿ ಶಾಲೆಯನ್ನು ಅಮಿತ್ ಶಾ ಉದ್ಘಾಟಿಸಲಿದ್ದಾರೆ ಎಂದು ಅವರು ತಿಳಿಸಿದರು.
ಜಿಲ್ಲೆಯ ಹಲವಾರು ಅಭಿವೃದ್ಧಿ ಕಾರ್ಯಗಳಿಗೆ ಸ್ಪಂದಿಸುವಂತೆ, ಕೇಂದ್ರದಿಂದ ಮಂಜೂರಾತಿ ಕೊಡಿಸುವಂತೆ ಕೇಂದ್ರ ಸಚಿವರಿಗೆ ಆ ಸಂದರ್ಭದಲ್ಲಿ ಮನವಿ ಸಲ್ಲಿಸಲಾಗುವುದು ಎಂದರು.