News Kannada
Tuesday, November 29 2022

ದಾವಣಗೆರೆ

ದಾವಣಗೆರೆ: ರೇಣುಕಾಚಾರ್ಯ ಅವರ ಸೋದರ ಪುತ್ರನ ಸಾವು, ಕೊಲೆ ಪ್ರಕರಣ ದಾಖಲಿಸಿದ ಪೊಲೀಸರು - 1 min read

Renukacharya's nephew's death, murder case registered by police
Photo Credit : News Kannada

ದಾವಣಗೆರೆ: ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸೋದರ ಪುತ್ರನ ಚಂದ್ರಶೇಖರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಗನನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಚಂದ್ರಶೇಖರ್ ತಂದೆ, ಸಂಸದ ರಮೇಶ್ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೇಹದ ಮೇಲೆ ಗಾಯದ ಗುರುತುಗಳಿದ್ದು, ಚಂದ್ರಶೇಖರ್ ಅವರ ಕೈಕಾಲುಗಳನ್ನು ಕಟ್ಟಿ ಹಾಕಿರುವಂತಿದೆ ಎಂದು ರಮೇಶ್ ದೂರಿನಲ್ಲಿ ಆರೋಪಿಸಿದ್ದಾರೆ.

ಹೊನ್ನಾಳಿ ಪೊಲೀಸರು  ಪೊಲೀಸರು ಸೆಕ್ಷನ್ 302 (ಕೊಲೆ), 201 (ಅಪರಾಧದ ಸಾಕ್ಷ್ಯಾಧಾರಗಳನ್ನು ಕಣ್ಮರೆಯಾಗುವಂತೆ ಮಾಡುವುದು ಅಥವಾ ಅಪರಾಧಿಗಳಿಗೆ ತಪ್ಪು ಮಾಹಿತಿ ನೀಡುವುದು) ಮತ್ತು 427 (ಹಾನಿ ಉಂಟುಮಾಡುವ ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ 24ರ ಹರೆಯದ ಪುತ್ರ ಅಕ್ಟೋಬರ್ 30ರ ಭಾನುವಾರ ನಾಪತ್ತೆಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು. ಅಕ್ಟೋಬರ್ 3ರ ಗುರುವಾರದಂದು ಹೊನ್ನಾಳಿ ಸಮೀಪದ ಕಾಲುವೆಯಲ್ಲಿ ಕಾರಿನೊಳಗೆ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು.

See also  ಬೆಂಗಳೂರು: ಕಬ್ಬಿಣದ ಅದಿರಿನ ಉತ್ಪಾದನೆಯಲ್ಲಿ ಹೆಚ್ಚಳ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು