News Karnataka Kannada
Saturday, April 20 2024
Cricket
ಬೆಂಗಳೂರು

ಡಿ ಕೆ ಶಿವಕುಮಾರ್ ತೆರಳುತ್ತಿದ್ದ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ: ತುರ್ತು ಭೂಸ್ಪರ್ಶ

Heli
Photo Credit :

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತೆರಳುತ್ತಿದ್ದ ಹೆಲಿಕಾಪ್ಟರ್ ಗೆ ಟೇಕಾಫ್ ವೇಳೆ ಹದ್ದು ಡಿಕ್ಕಿಯಾದ ಘಟನೆ ವರದಿಯಾಗಿದೆ. ಜಕ್ಕೂರು ಹೆಲಿಪ್ಯಾಡ್‌ನಿಂದ ಮುಳಬಾಗಿಲಿಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಟೇಕಾಫ್ ಆದ ಕೆಲ ಕ್ಷಣಗಳಲ್ಲೇ ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ ಹೊಡೆದಿದೆ.ಹದ್ದು ಡಿಕ್ಕಿಯಾದ ರಭಸಕ್ಕೆ ಹೆಲಿಕಾಪ್ಟರ್ ಗಾಜು ಪುಡಿ ಪುಡಿಯಾಗಿದೆ. ಡಿಕೆ ಶಿವಕುಮಾರ್ ಜೊತೆಗಿದ್ದ ಇತರ ಕೆಲವರಿಗೆ ಗಾಯಗಳಾಗಿದೆ. ಡಿಕೆ ಶಿವಕುಮಾರ್ ಅಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.ಈ ಘಟನೆಯಿಂದ ಹೆಲಿಕಾಪ್ಟರ್ ಪ್ರಯಾಣವನ್ನೇ ರದ್ದು ಮಾಡಿರುವ ಡಿಕೆ ಶಿವಕುಮಾರ್ ರಸ್ತೆ ಮೂಲಕ ಪ್ರಯಾಣ ಬೆಳೆಸಿದ್ದಾರೆ. ರಸ್ತೆ ಮೂಲಕ ಕೋಲಾರದ ಮುಳಬಾಗಿಲಿನಲ್ಲಿ ಆಯೋಜಿಸಿರುವ ಸಾರ್ವಜನಿಕ ಪ್ರಚಾರಕ್ಕೆ ತೆರಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು