News Kannada
Saturday, February 24 2024
ಬೆಂಗಳೂರು

ಬೆಂಗಳೂರು: ದಕ್ಷಿಣ ಒಳನಾಡಿಗೆ ಭಾರಿ ಮಳೆ ಎಚ್ಚರಿಕೆ

Heavy rains lash Tamil Nadu, one dead
Photo Credit : Pixabay

ಬೆಂಗಳೂರು: ರಾಜ್ಯದ ಉತ್ತರ ಕರ್ನಾಟಕ ಮತ್ತು ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ ಬೆಳಗಾವಿ ಕಲಬುರಗಿ ಮತ್ತು ಬೀದರ್‌ ಜಿಲ್ಲೆ ಭಾರಿ ಮಳೆಯಾಗುತ್ತಿರುವುದರಿಂದ ಕೆಲ ಪ್ರದೇಶಗಳು ಜಲಾವೃತವಾಗಿವೆ. ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ.

ದಕ್ಷಿಣ ಒಳನಾಡು ಪ್ರದೇಶಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ ಐದು ದಿನ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮನಾ ಇಲಾಖೆ ಮುನ್ಸೂಚನೆ ನೀಡಿದೆ. ಉಳಿದಂತೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು