News Karnataka Kannada
Saturday, April 27 2024
ಬೆಂಗಳೂರು

ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಭಾರಿ ಮಳೆ

ಕರ್ನಾಟಕಕ್ಕೆ ೨೦೨೪ರ ಮೊದಲ ಮಳೆಯು ಮಾರ್ಚ್ ತಿಂಗಳಲ್ಲೇ ಸುರಿದಿದೆ. ರಾಜ್ಯದ ಘಟ್ಟ ಪ್ರದೇಶಗಳಾದ ಹಾಗೂ ಹಲವು ನದಿಗಳ ಉಗಮ ಸ್ಥಾನಗಳೂ ಆಗಿರುವ ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ಮಳೆಯಾಗಿದೆ. ಇದರಿಂದ ಕಾದು ಕೆಂಡದಂತಾಗುತ್ತಿದ್ದ ಭೂಮಿ ತಂಪಾಗಿದ್ದು, ಕೆಲವು ಹಳ್ಳ ಕೊಳ್ಳಗಳು ಕೂಡ ತುಂಬಿ ಹರಿದಿವೆ.
Photo Credit : Pixabay

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ರಾಜಾಜಿನಗರ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಲಗ್ಗೆರೆ, ವಿಜಯನಗರ ಸೇರಿದಂತೆ ಹಲವು ಭಾಗಗಳಲ್ಲಿ ವರ್ಷಧಾರೆ ಜೋರಾಗಿದೆ. ಏಕಾಏಕಿ ಮಳೆ ಸುರಿದ ಕಾರಣ ವಾಹನ ಸವಾರರು ಪರದಾಡುವಂತಾಯಿತು.

ಹಲವು ರಸ್ತೆಗಳಲ್ಲಿ ನೀರು ನಿಂತು ಭಾರಿ ಸಮಸ್ಯೆ ಉಂಟಾಗಿದೆ. ಮೆಜೆಸ್ಟಿಕ್, ಕೃಷ್ಣರಾಜ ಮಾರುಕಟ್ಟೆ, ರಿಚ್‌ಮಂಡ್ ರಸ್ತೆ, ನಂಜಪ್ಪ ಸರ್ಕಲ್, ಜೆಪಿ ನಗರ, ಬನಶಂಕರಿ, ಶಾಂತಿನಗರ, ಚಾಮರಾಜಪೇಟೆ ಭಾಗಗಳಲ್ಲಿ ಕೂಡ ಉತ್ತಮ ಮಳೆ ಸುರಿಯುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು