ಬೆಂಗಳೂರು: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬರೋಬ್ಬರಿ 14 ತಿಂಗಳ ಹಿಂದೆ ಜೈಲು ಪಾಲಾಗಿದ್ದ ಮುರುಘಾ ಶ್ರೀಗಳು ನಾಲ್ಕು ದಿನಗಳ ಹಿಂದೆಯಷ್ಟೇ ಜಾಮೀನು ಮೇಲೆ ಹೊರ ಬಂದಿದ್ದರು. ಈ ಬೆನ್ನಲ್ಲೇ ಚಿತ್ರದುರ್ಗದ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯವೂ ಮುರುಘಾ ಶ್ರೀ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿತ್ತು.
ಹೀಗಾಗಿ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಮಧ್ಯಾಹ್ನ ಬಂಧಿಸಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಈ ಮಧ್ಯೆಯೇ ಹೈಕೋರ್ಟ್ ಈಗ ಮಹತ್ವದ ಆದೇಶ ಹೊರಡಿಸಿದೆ.
ಚಿತ್ರದುರ್ಗದ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯದ ಆದೇಶ ರದ್ದುಗೊಳಿಸಿ ಮುರುಘಾ ಶ್ರೀಗಳ ರಿಲೀಸ್ ಮಾಡಿ ಎಂದು ಹೈಕೋರ್ಟ್ ಆದೇಶಿಸಿದೆ. ಜತೆಗೆ ಮುರುಘಾ ಶ್ರೀಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದೆ.