ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವಂತೆ ಕಳೆದ ದಿನ( ಸೆ. 21) ಸುಪ್ರೀಂ ಕೋರ್ಟ್ ಆದೇಶವನ್ನು ಹೊರಡಿಸಿದ ಬೆನ್ನಲ್ಲೇ ರಾಜ್ಯಾದ್ಯಂತ ಕಾವೇರಿ ನೀರು ತಮಿಳುನಾಡಿಗೆ ಬಿಡಬಾರದು ಎಂದು ಉಗ್ರವಾದ ಹೋರಾಟಗಳು ಪ್ರತಿಭಟನೆಗಳು ನಡೆಯುತ್ತಿವೆ.
ಈ ಘಟನೆ ಕುರಿತಂತೆ ಇಂದು ವಿಧಾನಸೌಧದಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಮಾತನಾಡಿ, ಪ್ರತಿಭಟನೆ ಮಾಡುವುದು ಅವರ ಹಕ್ಕು.ನಮ್ಮದು ಯಾವುದೇ ತಕರಾರಿಲ್ಲ. ರಾಜ್ಯದ ಹಿತಾಸಕ್ತಿ ರಕ್ಷಣೆ ಮಾಡಲು ಪ್ರತಿಭಟನೆಯನ್ನು ಮಾಡಬಹುದು. ಯಾವುದೇ ರೀತಿ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಮಾಡುವುದಾಗಲಿ. ಕಾನೂನು ಬಾಹಿರ ಯಾವುದೇ ಚಟುವಟಿಕೆಗಳನ್ನ ಮಾಡಬಾರದು ಎಂದು ಗೃಹ ಸಚಿವರು ಪ್ರತಿಭಟನಾಕಾರರಲ್ಲಿ ಮನವಿ ಮಾಡಿದ್ದಾರೆ.