News Kannada
Monday, February 26 2024
ಬೆಂಗಳೂರು

ಯೋಗ್ಯತೆ ಇದ್ದರೆ ಸಮಸ್ಯೆ ಪರಿಹರಿಸಿ ಇಲ್ಲದಿದ್ದರೆ ಮನೆಗೆ ಹೋಗಿ: ಯಡಿಯೂರಪ್ಪ ಆಕ್ರೋಶ

If you have the ability, solve the problem or go home: Yediyurappa
Photo Credit : News Kannada

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಈ ವೇಳೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ನಿಮಗೆ ಯೋಗ್ಯತೆ ಇದ್ದರೆ ಸಮಸ್ಯೆ ಪರಿಹಾರ ಮಾಡಿ. ಇಲ್ಲದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ಎಲ್ಲರೂ ಸೇರಿ ನಾವು ಬೆಂಗಳೂರಿನಲ್ಲಿ ದೊಡ್ಡ ಹೋರಾಟ ಮಾಡುತ್ತೇವೆ. ಸುಪ್ರೀಂ ಕೋರ್ಟ್ ಗೆ ಮನವರಿಕೆ ಮಾಡಿಕೊಡಬೇಕು ಅಂತಾ ದೇವೇಗೌಡರು ಕೂಡಾ ಹೇಳಿದ್ದಾರೆ. ಕಾಂಗ್ರೆಸ್ ಮುಖಂಡರು ತಮಿಳುನಾಡು ಏಜೆಂಟರಂತೆ ವರ್ತನೆ ಖಂಡನೀಯ ಎಂದು ಆಕ್ರೋಶ ಹೊರ ಹಾಕಿದರು.

ಮೈಸೂರು ಬ್ಯಾಂಕ್ ವೃತ್ತದಲ್ಲಿ ರಸ್ತೆ ತಡೆಗೆ ಯತ್ನಿಸಿ ಪ್ರತಿಭಟನೆ ನಡೆಸಲು ಮುಂದಾದ ಹಿನ್ನೆಲೆ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ‌, ಗೋವಿಂದ ಕಾರಜೋಳ, ಕಾಗೇರಿ ಸೇರಿದಂತೆ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು