ಬೆಂಗಳೂರು: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ರಾಜ್ಯದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದ್ದು, ಇದಕ್ಕೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ. ಅದರಂತೆ ಇಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ.
ಈ ಹಿನ್ನಲೆ ಬೆಳಿಗ್ಗೆಯಿಂದಲೇ ಬಂದ್ಗೆ ಉತ್ತಮ ಪ್ರತಿಕ್ರಿಯೆ ಬಂದಿದ್ದು, ಅದರಂತೆ ಇದೀಗ ಕರವೇ ಕಾರ್ಯಕರ್ತರು ಕಾವೇರಿ ನೀರು ಬಿಡದಂತೆ ಘೋಷಣೆ ಕೂಗುತ್ತಾ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅರೈವಲ್ ಗೇಟ್ ಬಳಿ ಮುತ್ತಿಗೆ ಹಾಕಿದ್ದಾರೆ.
ಈ ವೇಳೆ 20 ಕ್ಕೂ ಅಧಿಕ ಕರವೇ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇನ್ನು ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ನದಿಗೆ ಇಳಿದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶ್ರೀರಂಗಪಟ್ಟಣ ಬಳಿ ಇರುವ ಕಾವೇರಿ ನದಿಗೆ ಇಳಿದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ಸಂಸದರ ಭಾವಚಿತ್ರ ಹಿಡಿದು ಕಾರ್ಯಕರ್ತರು ಘೋಷಣೆ ಕೂಗಿದರು.