ಬೆಂಗಳೂರು: ಕಳೆದ ಎರಡು ವರ್ಷಗಳಿಂದ ಗಣೇಶೋತ್ಸವಕ್ಕೆ ಕವಿದಿದ್ದ ಕೋವಿಡ್ ಕರಿಛಾಯೆ ಈ ಬಾರಿ ದೂರವಾಗಿದ್ದು, ಎಲ್ಲಾ ನಿರ್ಬಂಧ ತೆರವುಗೊಳಿಸಿ ಅದ್ದೂರಿಯ ಆಚರಣೆಗೆ ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದೆ.
ಈ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಹಿಂದಿನಂತೆಯೇ ಗಣೇಶನ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಈ ಬಾರಿ ಅವಕಾಶವಿದೆ ಎಂದರು.
ಪರಿಸರ ಸ್ನೇಹಿ ಮಣ್ಣಿನಿಂದ ತಯಾರಿಸಿದ ಗಣಪತಿ ವಿಗ್ರಹಗಳನ್ನು ಮಾತ್ರ ಪ್ರತಿಷ್ಠಾಪಿಸಬೇಕು, ಪರಿಸರ ಮಾಲಿನ್ಯಗೊಳಿಸುವ ಪ್ಲಾಸ್ಲರ್ ಆಫ್ ಪ್ಯಾರಿಸ್ ಇನ್ನಿತರ ವಸ್ತು ಬಳಸಿ ತಯಾರಿಸಿದ ವಿಗ್ರಹ ಕೂರಿಸುವಂತಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
ಹಬ್ಬದ ಸಂಭ್ರಮವನ್ನು ಹಳೆಯ ವೈಭವಕ್ಕೆ ಮರಳಿಸುವ ದೃಷ್ಟಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಚರ್ಚಿಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅವರು ತಿಳಿಸಿದರು.