ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ನಾಲ್ವರು ಹೆಣ್ಣು ಮಕ್ಕಳಿದ್ದದ್ದಕ್ಕೆ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಮೃತರನ್ನು ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಶೆಟ್ಟಿಹಳ್ಳಿಯ ಲೋಕೇಶ್ ಎಂದು ಗುರುತಿಸಲಾಗಿದೆ.
ಅವರಿಗೆ ಈಗಾಗಲೇ ಮೂವರು ಹೆಣ್ಣು ಮಕ್ಕಳಿದ್ದರು, ಮತ್ತು ಈಗ ಮತ್ತೆ ನಾಲ್ಕನೇ ಬಾರಿಗೆ ಅವರು ಹೆಣ್ಣು ಮಗುವನ್ನು ಹೊಂದಿದ್ದರು. ಇದರಿಂದ ಮನನೊಂದು ರಾತ್ರಿ ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶ್ರೀನಿವಾಸಪುರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.
ತನಿಖೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ ಮತ್ತು ಪೊಲೀಸ್ ಅಧಿಕಾರಿಗಳು ಲೋಕೇಶ್ ಮನೆಗೆ ಭೇಟಿ ನೀಡಿದ್ದಾರೆ.
ಸಹಾಯವಾಣಿಗೆ ಕರೆ ಮಾಡಿ:
ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು