ಕೋಲಾರ: ‘ಸಿದ್ದರಾಮಯ್ಯ ಅವರು ನನ್ನ ವಿರುದ್ಧ ಸ್ಪರ್ಧಿಸುವ ಧೈರ್ಯ ಮಾಡುವುದಿಲ್ಲ. ನಾನು ಇಲ್ಲಿ ಬಿಜೆಪಿ ಟಿಕೆಟ್ ನಲ್ಲಿ ಸ್ಪರ್ಧಿಸುತ್ತಿದ್ದೇನೆ. ನಾನು ಕೂಡ ಕುರುಬ ಸಮುದಾಯಕ್ಕೆ ಸೇರಿದವನು ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಹೇಳಿದ್ದು, ಅವರು ಇಲ್ಲಿಗೆ ಬಂದರೆ ಇಡೀ ಕುರುಬ ಸಮಾಜವೇ ಅವರನ್ನು ಛೀಮಾರಿ ಹಾಕುತ್ತದೆ ಎಂದು ಎಚ್ಚರಿಸಿದರು.
ಕೋಲಾರಕ್ಕೆ ತೆರಳುವ ಮಾರ್ಗಮಧ್ಯೆ ವೇಮಗಲ್ ನಿಂದ ಸೀತಿ-ಮಾಧೇರಿ-ರಾಜಕಲ್ಲಹಳ್ಳಿಯವರೆಗೆ ಬೃಹತ್ ಬೈಕ್ ರ‍್ಯಾಲಿ ನಡೆಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿದರು.
ಮಾಜಿ ಸಚಿವರಾದ ರಮೇಶ್ ಕುಮಾರ್, ಎಸ್.ಎನ್.ನಾರಾಯಣಸ್ವಾಮಿ ಮತ್ತಿತರರು ಸಿದ್ದರಾಮಯ್ಯ ಅವರನ್ನು ಸೋಲಿನ ಭೀತಿಯಿಂದ ಕರೆಯುತ್ತಿದ್ದಾರೆ. ಆದರೆ, ಇದುವರೆಗೂ ಸಿದ್ದರಾಮಯ್ಯ ಅವರು ಇಲ್ಲಿ ಸ್ಪರ್ಧಿಸುವುದಾಗಿ ಹೇಳಿಲ್ಲ. ವೇಮಗಲ್ ಹೋಬಳಿಯಲ್ಲಿ ನನ್ನಿಂದಾಗಿ ಅಭಿವೃದ್ಧಿ ಹೊಂದಿದ ಮೂವರು ವಂಚಕರನ್ನು ನಂಬಿ ಸಿದ್ದರಾಮಯ್ಯ ಕೋಲಾರಕ್ಕೆ ಬರಬೇಕು ಎಂದು ನಾನು ಭಾವಿಸುವುದಿಲ್ಲ ಎಂದು ಅವರು ಹೇಳಿದರು.