NewsKarnataka
Monday, January 24 2022

ರಾಮನಗರ

ಕಾಡು ಪ್ರಾಣಿಗಳನ್ನು ಬೇಟೆಯಾಡಲು ಹೊಂಚು ಹಾಕುತ್ತಿದ್ದ ಮೂವರು ಆರೋಪಿಗಳ ಬಂಧನ

ರಾಮನಗರ : ಕಾವೇರಿ ವನ್ಯಜೀವಿ ಧಾಮದ ಸಂಗಮ ವಲಯ ಅರಣ್ಯ ಪ್ರದೇಶಕ್ಕೆ ಅಕ್ರಮ ಪ್ರವೇಶ ಮಾಡಿ ಕಾಡು ಪ್ರಾಣಿಗಳನ್ನು ಬೇಟೆಯಾಡಲು ಹೊಂಚು ಹಾಕುತ್ತಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ತಾಲೂಕಿನ ಉಯ್ಯಂಬಳ್ಳಿ ಹೋಬಳಿಯ ಮಕ್ಕಳಂದ ಗ್ರಾಮದ ಸುಬ್ಬಯ್ಯ (48), ಮಂಜು (43), ದೊಡ್ಡಾಲಹಳ್ಳಿ ಗ್ರಾಮದ ಪುಟ್ಟಸ್ವಾಮಿ (50), ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ತಲೆಮರೆಸಿಕೊಂಡಿರುವ ಕೆಂಚೇಗೌಡ (38), ಕೀರ್ತಿ(43)ಇಬ್ಬರು ಆರೋಪಿಗಳಿಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಶೋಧ ಕಾರ್ಯ ಆರಂಭಿಸಿದ್ದಾರೆ.

ಆರೋಪಿಗಳು ಕಾವೇರಿ ವನ್ಯಜೀವಿ ಧಾಮದ ಸಂಗಮ ವಲಯ ಭೂಹಳ್ಳಿ ಶಾಖೆಯ ನಾಯಕನಹಳ್ಳಿ ಗಸ್ತಿನ ಕುರುಬನ ಗುಡ್ಡೆ ಅರಣ್ಯ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿ ನಾಡ ಬಂದೂಕು ಮತ್ತು ಮದ್ದುಗುಂಡುಗಳಿಂದ ಕಾಡು ಪ್ರಾಣಿಗಳನ್ನು ಬೇಟೆಯಾಡಲು ಹೊಂಚು ಹಾಕುತ್ತಿದ್ದರು.

ಖಚಿತ ಮಾಹಿತಿ ಮೇರೆಗೆ ಸಹಾಯಕ ಅರಣ್ಯ ಸಂರಕ್ಷಣಾಧಿ ಕಾರಿ ನಾಗೇಂದ್ರ ಪ್ರಸಾದ್‌ ಅವರ ಮಾರ್ಗದರ್ಶನದಲ್ಲಿ ವಲಯ ಅರಣ್ಯ ಅಧಿಕಾರಿ ದೇವರಾಜ್‌ ಅವರ ನೇತೃತ್ವದಲ್ಲಿ ಉಪ ವಲಯ ಅರಣ್ಯ ಅಧಿಕಾರಿ ನಿಹಾಲ್‌ ಅಹಮ್ಮದ್‌ ಡಾಂಗೆ, ಉಪವಲಯ ಅರಣ್ಯಾಧಿಕಾರಿ ಸದಾಶಿವ ಉಪ್ಪಾರ, ವೆಂಕಟೇಶ್‌, ಅರಣ್ಯ ರಕ್ಷಕ ನಿಂಗಪ್ಪ, ರವಿ ಒಳಗೊಂಡ ತಂಡ ದಾಳಿ ನಡೆಸಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿ ದ್ದಾರೆ.

ಈ ವೇಳೆ ಕೀರ್ತಿ ಮತ್ತು ಕೆಂಚೇಗೌಡ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಬಂಧಿತರಿಂದ ಒಂದು ನಾಡ ಬಂದೂಕು, ಮದ್ದುಗುಂಡುಗಳನ್ನು ವಶಕ್ಕೆ ಪಡೆದಿರುವ ಅರಣ್ಯ ಇಲಾಖೆ ಅಧಿಕಾರಿಗಳು ಆರೋಪಿಗಳ ವೈದ್ಯಕೀಯ ತಪಾಸಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ತಲೆಮರೆಸಿಕೊಂಡಿರುವ ಮತ್ತಿಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.