News Kannada
Friday, December 09 2022

ರಾಮನಗರ

ರಾಮನಗರ: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ, ತಂದೆ ಮತ್ತು ಮಗ ಸ್ಥಳದಲ್ಲೇ ಸಾವು

Kundapur: One person seriously injured as trucks collide head-on
Photo Credit : Freepik

ರಾಮನಗರ: ತಾಲೂಕಿನ ಸಾತನೂರು ಹೋಬಳಿಯ ತೊಟ್ಟಹಳ್ಳಿ ಗ್ರಾಮದಲ್ಲಿ ದ್ವಿಚಕ್ರ ವಾಹನ ಕಾರಿಗೆ ಡಿಕ್ಕಿ ಹೊಡೆದು ತಂದೆ-ಮಗ ಸಾವನ್ನಪ್ಪಿದ ದಾರುಣ ಘಟನೆ ಶುಕ್ರವಾರ ನಡೆದಿದೆ.

ಸಾತನೂರು ಹೋಬಳಿಯ ತೋಟಹಳ್ಳಿ ಗ್ರಾಮದ ಚಿಕ್ಕಪುಟ್ಟಯ್ಯ (60) ಮತ್ತು ಅವರ ಪುತ್ರ ಮಹೇಶ್ (30) ಮೃತಪಟ್ಟವರು. ಇಬ್ಬರು ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

ಕಿರಾಣಿ ವ್ಯಾಪಾರದಲ್ಲಿ ತೊಡಗಿದ್ದ ತಂದೆ-ಮಗ ದ್ವಿಚಕ್ರ ವಾಹನದಲ್ಲಿ ಶುಕ್ರವಾರ ತಮ್ಮ ವ್ಯಾಪಾರವನ್ನು ಮುಗಿಸಿಕೊಂಡು ತೋಟಹಳ್ಳಿಯ ತಮ್ಮ ಮನೆಗೆ ತೆರಳುತ್ತಿದ್ದಾಗ ತೋಟಹಳ್ಳಿ ಗ್ರಾಮದಿಂದ ವೇಗವಾಗಿ ಬರುತ್ತಿದ್ದ ಕಾರೊಂದು ಕೆರೆಯ ಬಳಿ ರಸ್ತೆ ತಿರುವಿನಲ್ಲಿ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತಂದೆ ಮತ್ತು ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರ ಕುಟುಂಬಸ್ಥರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಸಾತನೂರು ಪೊಲೀಸರು ತಾಲೂಕು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

See also  ಬೆಳ್ತಂಗಡಿ: ವಾಲಿಬಾಲ್ ಟೂರ್ನಿಯಲ್ಲಿ ಬಂದಾರು ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರ ಸಾಧನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು