News Kannada
Thursday, October 05 2023
ರಾಮನಗರ

ರಾಮನಗರ: ಪೌರಾಡಳಿತ ಹೊರ ಗುತ್ತಿಗೆ ನೌಕರರಿಗೆ ನೇರ ವೇತನ ಪಾವತಿ ವ್ಯವಸ್ಥೆ ಶೀಘ್ರವೇ ಜಾರಿ

Direct payment of salaries to municipal outsourced employees
Photo Credit : By Author

ರಾಮನಗರ: ಪೌರಾಡಳಿತ ಇಲಾಖೆಯಲ್ಲಿನ 10,600 ಹೊರಗುತ್ತಿಗೆ ನೌಕರರಿಗೆ ನೇರ ವೇತನ ಪಾವತಿ ವ್ಯವಸ್ಥೆಯನ್ನು ಶೀಘ್ರವೇ ಜಾರಿಗೆ ತರಲಾಗುವುದು ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜು ಭರವಸೆ ನೀಡಿದರು.

ಜಿಲ್ಲೆಯ 6 ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 125 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಪೌರಾಡಳಿತ ಇಲಾಖೆಯಲ್ಲಿ ಒಟ್ಟು 38 ಸಾವಿರ ಕಾರ್ಮಿಕರಿದ್ದು, ಮುಂದೆ ಜಿಲ್ಲಾ ಮಟ್ಟ ಮಟ್ಟದಲ್ಲಿ ಜಿಲ್ಲಾಧಿಕಾರಿಗೆ ಪೌರ ಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಳ್ಳಲು ಅವಕಾಶ ನೀಡಲಾಗುವುದು. ರಾಜ್ಯ ಸರ್ಕಾರ ಈಗಾಗಲೇ 11,600 ಪೌರ ಕಾರ್ಮಿಕರ ಸೇವೆಯನ್ನು ಖಾಯಂ ಮಾಡಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾತನಾಡಿ, ಜಿಲ್ಲೆಯಲ್ಲಿ 2 ಲಕ್ಷ ಮನೆಗಳಿಗೆ ನದಿ ನೀರು ಒದಗಿಸುವ ಜಲಜೀವನ್ ಮಿಷನ್ ಯೋಜನೆಯನ್ನು 1300 ಕೋಟಿ ವೆಚ್ಚದಲ್ಲಿ ಕಾರ್ಯಗತಗೊಳಿಸಲಾಗುತ್ತಿದ್ದು, ಇದರಲ್ಲಿ 700 ಕೋಟಿ ರೂ ಮೊತ್ತದ ಯೋಜನೆಗಳಿಗೆ ಟೆಂಡರ್ ಪ್ರಕ್ರಿಯೆ ನಡೆದಿದೆ. ಸ್ಥಳೀಯ ಸಂಸ್ಥೆಗಳಿಗೆ 3 ಸಾವಿರ ಕೋಟಿ ಅನುದಾನ ನೀಡಲಾಗಿದ್ದು ಇದರಲ್ಲಿ ರಾಮನಗರ ಜಿಲ್ಲೆಗೆ 125 ಕೋಟಿ ರೂ ಲಭಿಸಿದೆ. ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳು ರಾಜ್ಯದಲ್ಲಿಯೇ ಅತಿ ವೇಗದಲ್ಲಿ ಬೆಳೆಯುತ್ತಿವೆ. ಈ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಪೂರಕವಾದ ಮೂಲಭೂತ ಸೌಕರ್ಯಗಳನ್ನು ದೊರಕಿಸಲು ಪಕ್ಷಾತೀತವಾಗಿ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದರು.

ಮಾಗಡಿ ಶಾಸಕ ಎ.ಮಂಜುನಾಥ್ ಮಾತನಾಡಿ, ಜಿಲ್ಲೆಯ ಅಭಿವೃದ್ಧಿಗೆ ಬಿಜೆಪಿ ಸರ್ಕಾರದಿಂದ ಪಕ್ಷಾತೀತವಾಗಿ ಸಹಕಾರ ದೊರೆಯುತ್ತಿದೆ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಘೋಷಣೆಯಾಗಿದ್ದ ಯೋಜನೆಗಳೆಲ್ಲವೂ ಈಗ ಸಾಕಾರಗೊಳ್ಳುತ್ತಿವೆ. ರೇಷ್ಮೆ ಮಾರುಕಟ್ಟೆ, ರಾಜೀವ್‌ಗಾಂಧಿ ಆರೋಗ್ಯ ವಿವಿ, ಹೈಟೆಕ್ ಜಿಲ್ಲಾಸ್ಪತ್ರೆ, ಮಾವು ಸಂಸ್ಕರಣಾ ಘಟಕ ಎಲ್ಲವೂ ಸಾಕಾರಗೊಳ್ಳುತ್ತಿದೆ. ಬಿಡದಿ ಪುರಸಭೆಅನುದಾನ ಹಂಚಿಕೆಯಲ್ಲಿ ನಾನು ಯಾವುದೇ ಕಾರಣಕ್ಕೂ ರಾಜಕೀಯ ಮಾಡುವುದಿಲ್ಲ. ಡಿಸಿ ಅವರಿಗೆ ಪತ್ರ ಮೂಲಕ ಸಮಾನವಾಗಿ ಹಂಚಿಕೆಗೆ ಮನವಿ ಮಾಡಿದ್ದೆನೆ ಎಂದು ತಿಳಿಸಿದರು.

ವೇದಿಕೆ ಕಾರ್ಯಕ್ರಮದಲ್ಲಿ ಬಿಡದಿ ಪುರಸಭೆ ವ್ಯಾಪ್ತಿಯ ವಾರ್ಡುಗಳಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆಗಿದ್ದು, ಇದನ್ನು ಸರಿಪಡಿಸಬೇಕು. ಪುರಸಭೆಗೆ ವಿಶೇಷ ಅನುದಾನ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ. ಲಿಂಗಪ್ಪ ಸಚಿವರಲ್ಲಿ ಮನವಿ ಪತ್ರ ನೀಡಿದರು.

ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್, ಜಿಪಂ ಸಿಇಒ ದಿಗ್ವಿಜಯ್ ಬೋಡ್ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು, ಮುಖಂಡ ಪ್ರಸಾದ್‌ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಹುಲುವಾಡಿ ದೇವರಾಜು, ಜಿಲ್ಲಾ ಕೆಡಿಪಿ ಸಮಿತಿ ಸದಸ್ಯ ಲೋಕೇಶ್, ತಾಲ್ಲೂಕು ಕೆಡಿಪಿ ಸಮಿತಿ ಸದಸ್ಯ ನಾರಾಯಣರೆಡ್ಡಿ ಸೇರಿದಂತೆ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

See also  ಚಾರ್ಟರ್ಡ್ ಅಕೌಂಟೆಂಟ್ಸ್ ದಿನವನ್ನು ಆಚರಿಸಿದ ಐಸಿಎಐಯ ಎಸ್ಐಆರ್ ಸಿನ ಬೆಂಗಳೂರು ಶಾಖೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು