ಬೆಂಗಳೂರು: ರಾಜ್ಯದ 195 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ಬರಗಾಲದಿಂದ ರಾಜ್ಯದಲ್ಲಿ 30,432 ಕೋಟಿ ರೂ. ನಷ್ಟವಾಗಿದೆ. 4,860 ಕೋಟಿ ಪರಿಹಾರ ನೀಡುವಂತೆ ನಾವು ಕೇಂದ್ರ ಸರ್ಕಾರವನ್ನು ಕೋರುತ್ತೇವೆ ಎಂದು ಕಾನೂನು ಸಚಿವ ಎಚ್. ಕೆ . ಪಾಟೀಲ್ ಹೇಳಿದ್ದಾರೆ.
ತೋಟಗಾರಿಕಾ ಬೆಳೆ ನಷ್ಟವು 2,655 ಕೋಟಿ ರೂಪಾಯಿಗಳೆಂದು ಅಂದಾಜು ಮಾಡಲಾಗಿದ್ದು, ಅದೇ ರೀತಿ 195 ಜಾನುವಾರು ಶಿಬಿರಗಳನ್ನು ಸ್ಥಾಪಿಸಲು 104 ಕೋಟಿ ರೂ.ಗೆ ಬೇಡಿಕೆ ಇಡಲಾಗುವುದು ಎಂದು ವಿವರಿಸಿದರು.
ರಾಜ್ಯ ಸರ್ಕಾರವು 624 ಪಶು ಆಹಾರ ಬ್ಯಾಂಕ್‌ಗಳನ್ನು ಸ್ಥಾಪಿಸಲು 126.3 ಕೋಟಿ ರೂಪಾಯಿ ಪರಿಹಾರವನ್ನು ಕೋರಲಿದೆ ಮತ್ತು ಔಷಧಗಳಿಗಾಗಿ 25 ಕೋಟಿ ರೂಪಾಯಿಗಳನ್ನು ಕೋರಲಾಗುವುದು ಎಂದು ಹೇಳಿದರು.
ಈ ಕುರಿತು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಸೂಚಿಸಿದ್ದಾರೆ.