ತುಮಕೂರು: ಕಾರಿನ ಟೈಯರ್ ಸ್ಪೋಟಗೊಂಡು ಆಗಿ ಸ್ಥಳದಲ್ಲೇ ಮಹಿಳೆ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಶಿಲ್ಪ (32), ವಿನಾಯಕ ಸ್ವಾಮಿ(35) ಮೃತ ದಂಪತಿಗಳು. ವ್ಯಾಗನಾರ್ ಕಾರಿನ ಟೈಯರ್ ಬ್ಲಾಸ್ಟ್ ಆಗಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಕಾರ್ನಲ್ಲಿದ್ದ ದಂಪತಿಗಳಿಬ್ಬರೂ ಮೃತಪಟ್ಟಿದ್ದಾರೆ. ಇನ್ನು ಕಾರಿನಲ್ಲಿದ್ದ 5 ವರ್ಷದ ಮಗುವಿಗೆ ಗಂಭೀರವಾದ ಗಾಯಗಳಾಗಿವೆ. ಶಿರಾ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತ ದಂಪತಿಗಳು ಧಾರವಾಡದಿಂದ ಬೆಂಗಳೂರಿಗೆ ಬರುತ್ತಿದ್ದರು. ಟೈಯರ್ ಸ್ಫೋಟಗೊಂಡ ಪರಿಣಾಮ ಕಾರು ಪಲ್ಟಿ ಹೊಡೆದು ದುರ್ಘಟನೆ ನಡೆದಿದೆ. ಶಿರಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.