News Karnataka Kannada
Tuesday, April 23 2024
Cricket
ತುಮಕೂರು

ನಾಳೆಯಿಂದ ಶಾಲಾ – ಕಾಲೇಜು ಆರಂಭ ಸಿದ್ಧತೆ ಪರಿಶೀಲಿಸಿದ ಸಚಿವ ಬಿ. ಸಿ. ನಾಗೇಶ್

B C Nagesh Minister
Photo Credit :
ತುಮಕೂರು : ನಾಳೆಯಿಂದ ರಾಜ್ಯದಲ್ಲಿ 9, 10 ನೇ ತರಗತಿ ಮತ್ತು ಪಿಯುಸಿ ತರಗತಿ ಆರಂಭವಾಗಲಿದ್ದು,  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ತುಮಕೂರು ತಾಲೂಕಿನ ಹೆಗ್ಗೆರೆ ಗ್ರಾಮದ ಪ್ರೌಢಶಾಲೆಯಲ್ಲಿ ಸಿದ್ಧತೆ ಪರಿಶೀಲಿಸಿದರು.

ಈ ವೇಳೆ ಮಾತನಾಡಿದ ಅವರು, ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎಂದು ಮೊದಲಿಗೆ ಹೇಳಲಾಗಿತ್ತು. ಆದರೆ, ತಜ್ಞರು ಮಕ್ಕಳ ಮೇಲೆ ಮೂರನೇ ಅಲೆ ಪರಿಣಾಮ ಕಡಿಮೆ ಎಂದು ತಿಳಿಸಿದ್ದಾರೆ. ಸೋಂಕು ಹರಡುವ ಸಾಧ್ಯತೆ ಕಡಿಮೆ. ಸೋಂಕು ತಗುಲಿದರೂ ಗಂಭೀರ ಪರಿಣಾಮವಿಲ್ಲ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ 1ರಿಂದ 8ನೇತರಗತಿ ಆರಂಭಿಸಲು ಚಿಂತನೆ ನಡೆದಿದೆ ಎಂದರು.

ಪಾಸಿಟಿವಿಟಿ ದರ ಶೇಕಡ 2 ಕ್ಕಿಂತ ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಶಾಲೆ-ಕಾಲೇಜು ಬಾಗಿಲು ತೆಗೆಯುವುದಿಲ್ಲ. ರಾಜ್ಯದ 5 ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳನ್ನು ಆರಂಭಿಸುವುದಿಲ್ಲ ಎಂದು ಮಾಹಿತಿ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು