ತುಮಕೂರು: ತುಮಕೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಮತದಾನ ನಡೆಯುವ 72 ಗಂಟೆಗಳ ಮುನ್ನ ಬಹಿರಂಗ ಪ್ರಚಾರ ನಿಲ್ಲಿಸಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ಸೂಚಿಸಿದ್ದಾರೆ.
ಎಲ್ಲ ರಾಜಕೀಯ ಪಕ್ಷ/ಅಭ್ಯರ್ಥಿಗಳು ಕಡ್ಡಾಯವಾಗಿ ಕೋವಿಡ್ ನಿಮಗಳನ್ನು ಅನುಸರಿಸುವುದರೊಂದಿಗೆ ಮತದಾನ ಮುಕ್ತಾಯಗೊಳ್ಳುವ 72 ಗಂಟೆಗಳ ಮುಂಚಿತವಾಗಿ ಸಾರ್ವಜನಿಕ ಸಭೆ, ಬೈಕ್ ರ್ಯಾಲಿ, ಬೀದಿ ನಾಟಕ ಸೇರಿದಂತೆ ಮತ್ತಿತರ ಬಹಿರಂಗ ಪ್ರಚಾರಗಳನ್ನು ನಿಲ್ಲಿಸಬೇಕೆಂದು ತಿಳಿಸಿದ್ದಾರೆ.
ಯಅವರುಈ ಸೂಚನೆಯನ್ವಯ ಬಹಿರಂಗ ಚುನಾವಣಾ ಪ್ರಚಾರವನ್ನು ಡಿಸೆಂಬರ್ 7ರ ಸಂಜೆ 4 ಗಂಟೆಯೊಳಗೆ ನಿಲ್ಲಿಸಬೇಕು ಎಂದು ಸೂಚನೆ ನೀಡಿದ್ದಾರೆ.