ತುಮಕೂರು : ರಾಜ್ಯಾದ್ಯಂತ ಹಿಜಾಬ್, ಕೇಸರಿ ಶಾಲು ಸಂಘರ್ಷ ಮುಂದುವರೆದಿದ್ದು, ಹಿಜಾಬ್ ಗಾಗಿ ಪ್ರತಿಭಟನೆ ನಡೆಸಿದ 10 ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ವಿರುದ್ದ ತುಮಕೂರು ನಗರ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ತುಮಕೂರಿನ ಟೌನ್ ಹಾಲ್ ಬಳಿಯ ಎಂಪ್ರೆಸ್ ಶಾಲೆಯ ಬಳಿ ನಿನ್ನೆ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು.
144 ಸೆಕ್ಷನ್ ಜಾರಿ ಇದ್ದರೂ ಗುಂಪು ಸೇರಿ ಪ್ರತಿಭಟನೆ ನಡೆಸಿದ್ದರು. ಹೀಗಾಗಿ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ 10 ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ವಿರುದ್ಧ ಎಫ್ ಐಆರ್ ದಾಖಲಾಗಿದೆ.