ತುಮಕೂರು: ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಆಟೋರಿಕ್ಷಾ ಪಲ್ಟಿಯಾಗಿ ಇಬ್ಬರು ವ್ಯಕ್ತಿಗಳು ಸ್ಥಳದಲ್ಲಿಯೆ ಮೃತಪಟ್ಟಿರುವ ಘಟನೆ ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯ ನಲಿಗಾನಹಳ್ಳಿ ಗ್ರಾಮದ ಬಳಿ ನಡೆದಿದೆ. ಕೋಣನ ಕುರಿಕೆ ಬಂಡಪ್ಪ 55 ಹಾಗೂ ಸಣ್ಣ ಸಿದ್ದಪ್ಪನವರ ಬಂಡಪ್ಪ ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಆಟೋದಲ್ಲಿ ಬಿ ದೊಡ್ಡ ಹಟ್ಟಿ ಗ್ರಾಮದಿಂದ ಪಾವಗಡ ಪಟ್ಟಣಕ್ಕೆ ಏಳು ಜನ ಪ್ರಯಾಣಿಕರು ತೆರಳುತ್ತಿದ್ದರು , ನಲಿ ಗಾನ ಹಳ್ಳಿ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿದೆ. ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹಾಗೂ ನಾಗಮ್ಮ ಎಂಬ ಮಹಿಳೆಗೆ ತೀವ್ರತರಹದ ಗಾಯಗಳಾಗಿದ್ದು ಗಾಯಾಳುಗಳನ್ನು ಪಾವಗಡ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆ ತಿಳಿದು ಸ್ಥಳೀಯ ಶಾಸಕ ವೆಂಕಟರಮಣಪ್ಪ ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರೊಂದಿಗೆ ಮಾತುಕತೆ ನಡೆಸಿದ್ದಾರೆ.