News Kannada
Monday, January 30 2023

ತುಮಕೂರು

ತುಮಕೂರು: ಇಬ್ಬರು ಬಾಲಕರ ಮೇಲೆ ಚಿರತೆ ದಾಳಿ!

Photo Credit : News Kannada

ತುಮಕೂರು: ತುಮಕೂರಿನಲ್ಲಿ ಇಬ್ಬರು ಬಾಲಕರ ಮೇಲೆ ಚಿರತೆ ದಾಳಿ ನಡೆಸಿದ್ದು, ಕೊರಟಗೆರೆ ತಾಲೂಕಿನ ಇರಕ ಸಂದ್ರ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಬಾಲಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ ಕೆಲವು ವಾರಗಳಿಂದ ಕರ್ನಾಟಕದ ವಿವಿಧೆಡೆ ಚಿರತೆ ದಾಳಿಗಳು ನಡೆಯುತ್ತಿರವುದು ಪರಿಸರವಾದಿಗಳು ಮತ್ತು ವನ್ಯಜೀವಿ ತಜ್ಞರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಈ ತಿಂಗಳ ಆರಂಭದಲ್ಲಿ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಕೆಬ್ಬೆಗುಂಡಿ ಗ್ರಾಮದ ತನ್ನ ಮನೆಯಲ್ಲಿ ಗುರುವಾರ 22 ವರ್ಷದ ಮಹಿಳೆಯನ್ನು ಹತ್ಯೆ ಮಾಡಲಾಗಿತ್ತು.

ಬೆಂಗಳೂರಿನ ಹೊರ ಭಾಗಗಳಲ್ಲೂ ಚಿರತೆ ಕಾಣಿಸಿಕೊಂಡಿದ್ದು, ಸಿಸಿಟಿವಿ ದೃಶ್ಯಾವಳಿಗಳು ಪತ್ತೆಯಾಗಿವೆ. ಚಿರತೆಗಳು ಓಡಾಡುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಐಟಿಸಿ ಕಾರ್ಖಾನೆ ಪ್ರದೇಶದಲ್ಲಿ ಕಾಣಿಸಿಕೊಂಡ ಚಿರತೆಯನ್ನು ಹಿಡಿಯಲು ಬೆಂಗಳೂರಿನ ಚಿಕ್ಕಜಾಲದಲ್ಲಿ ಎರಡು ಬೋನ್‌ಗಳನ್ನು ಸಿದ್ಧಪಡಿಸಲಾಗಿದೆ ಎಂದು ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೀಗಾಗಿ ಜನರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.

See also  ಹೈದರಾಬಾದ್: 'ಲಾಲ್ ಸಿಂಗ್ ಚಡ್ಡಾ' ಚಿತ್ರವನ್ನು ತೆಲುಗಿನಲ್ಲಿ ಪ್ರಸ್ತುತಪಡಿಸಲಿದ್ದಾರೆ ಚಿರಂಜೀವಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು