ತುಮಕೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಜನತೆಗೆ ಹಣವಿಲ್ಲದೇ ಸುಳ್ಳು ಬಜೆಟ್ ಘೋಷಣೆ ಮಾಡುತ್ತಿದ್ದಾರೆ. ಭವಿಷ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಬಿಜೆಪಿ ವಿರೋಧ ಪಕ್ಷವಾಗಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಜಿ.ಪರಮೇಶ್ವರ ಹೇಳಿದರು.
ಜಿಲ್ಲೆಯ ಮಧುಗಿರಿ ತಾಲೂಕಿನ ಪುರವರ ಹೋಬಳಿಯ ಹನುಮಂತಪುರದಲ್ಲಿ ಕಾಂಗ್ರೆಸ್ ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಂಡು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಿಎಂ ಬೊಮ್ಮಾಯಿ ಹಣ ನೀಡದೆ ಬರೀ ಖಾಲಿ ಬಜೆಟ್ ಘೋಷಣೆ ಮಾಡುತ್ತಿದ್ದಾರೆ. ಜನರಿಗೆ ಹಣ ನೀಡದೆ ವಂಚಿಸುತ್ತಿದ್ದಾರೆ ಎಂದರು.
ಹಣ ನೀಡಿ ಬಜೆಟ್ ಘೋಷಿಸಿದರೆ ನಮ್ಮ ಅಭ್ಯಂತರವಿಲ್ಲ. ನಾವು ಚುನಾವಣೆಗಾಗಿ ಸುಳ್ಳು ಬಜೆಟ್ ಮಂಡಿಸಲು ಪ್ರಯತ್ನಿಸುತ್ತಿದ್ದೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತವಾಗಿದ್ದು, ಇದೇ ತಿಂಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದರು.