News Karnataka Kannada
Friday, March 29 2024
Cricket
ತುಮಕೂರು

ಸಿಎಂ ಸಿದ್ದರಾಮಯ್ಯ ನವರ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಡಾ.ಜಿ.ಪರಮೇಶ್ವರ್

Dr G Parameshwara takes oath as minister in CM Siddaramaiah's cabinet
Photo Credit : News Kannada

ಕೊರಟಗೆರೆ: ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ದಲಿತ ನಾಯಕ ಡಾ.ಜಿ.ಪರಮೇಶ್ವರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಅವರು ಎರಡನೇ ಬಾರಿ ಸಿಎಂ ಆಗಿರುವ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಚಿವರಾಗಿ ಆಯ್ಕೆ ಆಗಿದ್ದಾರೆ.

ಡಾ.ಜಿ ಪರಮೇಶ್ವರ್ ಪರಿಚಯ: ಇವರು ಆಗಸ್ಟ್ ೬,೧೯೫೧ ರಂದು ತುಮಕೂರಿನ ಗೊಲ್ಲಹಳ್ಳಿಯಲ್ಲಿ ಜನಿಸಿದರು. ಅವರು ಗಂಗಮಾಳಮ್ಮ ಚಿಕ್ಕಣ್ಣ ಮತ್ತು ಮಾಜಿ ಎಂಎಲ್‌ಸಿ ಗಂಗಾಧರಯ್ಯ ಹೆಬ್ಬಾಳು ಮರಿಯಪ್ಪ ಅವರಿಗೆ ಜನಿಸಿದರು. ನಂತರ ಅವರು ಪ್ರಾಥಮಿಕ ಶಿಕ್ಷಣವನ್ನು ಗೊಲ್ಲಹಳ್ಳಿ ಮತ್ತು ತುಮಕೂರಿನ  ಹೆಗ್ಗೆರೆಯ ಸರ್ಕಾರಿ ಶಾಲೆಯಲ್ಲಿ ಮುಗಿಸಿದರು.

೧೯೫೯ರಲ್ಲಿ ತಮ್ಮ ತಂದೆ ಸ್ಥಾಪಿಸಿದ ನಗರದ ಸಿದ್ದಾರ್ಥ ಪ್ರೌಢಶಾಲೆಗೆ ಸೇರಿಕೊಂಡರು. ಬಳಿಕ ತುಮಕೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬಿಎಸ್ಸಿ, ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಕೃಷಿಯಲ್ಲಿ ಎಂ.ಎಸ್ಸಿ, ಅದೇ ಕಾಲೇಜಿನಲ್ಲಿ ಕೃಷಿಯಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಪರಮೇಶ್ವರ ಅವರು ಸಂಕ್ಷಿಪ್ತವಾಗಿ ಬೆಂಗಳೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸಸ್ಯ ಶಾಸ್ತ್ರದ ವಿಭಾಗದಲ್ಲಿ ಸಂಶೋಧನಾ ಸಹಾಯಕರಾಗಿ ಕೆಲಸ ಮಾಡಿದರು.

ಅಲ್ಲದೆ ಡಾ.ಜಿ.ಪರಮೇಶ್ವರ್ ಅವರು ಈ ಬಾರಿಯೂ ಕೊರಟಗೆರೆ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದು, ಇನ್ನು ಇವರಿಗೆ ಪೈಪೋಟಿ ನಡೆಸಿದ್ದ ಜೆಡಿಎಸ್‌ನ ಸುಧಾಕರ್ ಲಾಲ್ ಅವರು ೧೪,೩೪೭ ಮತಗಳ ಅಂತರದಿಂದ ಸೋಲನುಭವಿಸಿದ್ದರು. ಈ ಮೂಲಕ ತುಮಕೂರು ಜಿಲ್ಲೆಯ ಕೊರಟಗೆರೆ ಕ್ಷೇತ್ರದಲ್ಲಿ ಮಾಜಿ ಡಿಸಿಎಂ ಜಿ. ಪರಮೇಶ್ವರ್ ಸ್ಪರ್ಧಿಸಿ ರಾಜ್ಯದ ಗಮನ ಸೆಳೆದಿದ್ದರು.

ಕಳೆದ ಮೂರು ವಿಧಾನಸಭೆ ಚುನಾವಣೆಗಳಲ್ಲಿ ಕೊರಟಗೆರೆ ಎಸ್‌ಸಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಎರಡು ಬಾರಿ ಜಯ ಸಾಧಿಸಿತ್ತು. ಹಾಗೆಯೇ ಈ ಬಾರಿಯೂ ಕೂಡ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಇನ್ನು ಜೆಡಿಎಸ್ ಒಂದು ಬಾರಿ ಮಾತ್ರ ಗೆಲುವು ಸಾಧಿಸಿದೆ. ೧೯೯೯ ಮತ್ತು ೨೦೦೪ರ ವಿಧಾನಸಭೆ ಚುನಾವಣೆಗಳಲ್ಲಿ ಜೆಡಿಎಸ್? ಪಕ್ಷದ ಸಿ.ಚನ್ನಿಗಪ್ಪ ಆಯ್ಕೆ ಆಗಿದ್ದರು.

೨೦೦೮ರ ಚುನಾವಣೆಯಲ್ಲಿ ಜೆಡಿಎಸ್‌ನ ಚಂದ್ರಯ್ಯ ವಿರುದ್ಧ ಕಾಂಗ್ರೆಸ್ ಪಕ್ಷದ ಡಾ. ಜಿ.ಪರಮೇಶ್ವರ್ ಅವರು ೧೧ ಸಾವಿರ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು. ೨೦೧೩ರ ಚುನಾವಣೆಯಲ್ಲಿ ಜೆಡಿಎಸ್‌ನ ಸುಧಾಕರ್ ಲಾಲ್ ಅವರು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿದ್ದ ಜಿ. ಪರಮೇಶ್ವರ್ ಅವರನ್ನು ೧೮ ಸಾವಿರ ಮತಗಳ ಅಂತರದಲ್ಲಿ ಸೋಲಿಸಿದ್ದರು. ಇದು ಮುಖ್ಯಮಂತ್ರಿ ಹುದ್ದಗೇರುವ ಪರಮೇಶ್ವರ್ ಅವರ ಆಸೆಗೆ ಅಡ್ಡದಾರಿ ಆದಂತಾಗಿತ್ತು.

ಇನ್ನು ೨೦೧೮ರ ಚುನಾವಣೆಯಲ್ಲಿ ಜೆಡಿಎಸ್‌ನ ಸುಧಾಕರ್‌ಲಾಲ್ ಅವರು ೭೩,೯೭೯ ಮತಗಳನ್ನು ಪಡೆದರೆ, ಕಾಂಗ್ರೆಸ್‌ನ ಜಿ. ಪರಮೇಶ್ವರ್ ೮೧,೫೯೮ ಮತಗಳನ್ನು ಪಡೆದು, ೭,೬೧೯ ಮತಗಳ ಅಂತರದಲ್ಲಿ ಸುಧಾಕರ್ ಲಾಲ್ ಅವರನ್ನು ಪರಾಭವಗೊಳಿಸಿದ್ದರು. ಡಾ.ಜಿ. ಪರಮೇಶ್ವರ ಕರ್ನಾಟಕದ ಉಪ ಮುಖ್ಯಮಂತ್ರಿಯಾಗಿಯೂ ಕಾರ್ಯ ನಿರ್ವಹಸಿದ್ದಾರೆ. ೧೯೯೩ ರಿಂದ ವಿವಿಧ ಆಡಳಿತಗಳಲ್ಲಿ ಹಲವಾರು ಖಾತೆಗಳ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ದಲಿತ ಮುಖಂಡರಾಗಿರುವ ಇವರು ೪ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ೧೯೮೯, ೧೯೯೯ ಮತ್ತು ೨೦೦೪ ರಲ್ಲಿ ಮಧುಗಿರಿ ವಿಧಾನಸಭಾ ಕ್ಷೇತ್ರ ಹಾಗೂ ಕ್ಷೇತ್ರ ಪುನರ್ವಿಂಗಡಣೆಯ ನಂತರ ೨೦೦೮ರಲ್ಲಿ ಕೊರಟಗೆರೆ ಕ್ಷೇತ್ರವನ್ನು ಪರಮೇಶ್ವರ ಪ್ರತಿನಿಧಿಸಿದ್ದರು.

ರಾಜ್ಯದ ದಲಿತ, ಇತರ ಪ್ರಮುಖ ಸಮುದಾಯಗಳು, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ವಿಶ್ವಾಸವನ್ನು ಕೂಡ ಗಳಿಸಿದ್ದಾರೆ. ಸತತ ಎರಡು ಅವಧಿಗೆ ಕೆಪಿಸಿಸಿ ಅಧ್ಯಕ್ಷರಾಗಿದ್ದ ಇವರು ದೀರ್ಘ ಕಾಲ ಈ ಹುದ್ದೆಯನ್ನು ನಿರ್ವಹಿಸಿದ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಹಾಗೆಯೆ ಇವರು ದಲಿತ ನಾಯಕರಾಗಿದ್ದು, ಇವರಿಗೆ ಡಿಸಿಎಂ ಹುದ್ದೆ ನೀಡುವಂತೆ ಒತ್ತಾಯಗಳು ಕೂಡ ಕೇಳಿಬಂದಿದ್ದವು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು