ಬೆಂಗಳೂರು: ಸಿದ್ದರಾಮಯ್ಯ ಅವರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿ ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಎಂದು ಹೇಳಿಕೆ ನೀಡಿದ್ದ ಮಾಜಿ ಸಚಿವ ಸಿಎನ್ ಅಶ್ವಥ್ ನಾರಾಯಣ್ ಅವರ ವಿರುದ್ಧ ಬುಧವಾರ ಎಫ್ಐಆರ್ ದಾಖಲಾಗಿದೆ.
ಫೆಬ್ರವರಿ 15 ರಂದು ಮಂಡ್ಯ ಜಿಲ್ಲೆಯ ಸಾತನೂರಿನಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಅಶ್ವತ್ಥ ನಾರಾಯಣ್ , ಉರಿಗೌಡ ಮತ್ತು ನಂಜೇಗೌಡರು ಟಿಪ್ಪು ಸುಲ್ತಾನರನ್ನು ಹೇಗೆ ಕೊಂದು ಹಾಕಿದರೋ, ಹಾಗೆ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಈ ಹೇಳಿಕೆ ಮೇಲೆ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.