News Kannada
Sunday, February 25 2024
ಕರ್ನಾಟಕ

‘ಸರಳ ವಿವಾಹ ‘ಯೋಜನೆ: SC/ST ವರ್ಗದವರಿಗೆ ಭರ್ಜರಿ ಸಿಹಿ ಸುದ್ದಿ

ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಮದುವೆಯಾದ ಪರಿಶಿಷ್ಟ ಜಾತಿ,ಪಂಗಡಕ್ಕೆ ಸೇರಿದ ದಂಪತಿಗೆ 'ಸರಳ ವಿವಾಹ ಯೋಜನೆ' ಅಡಿಯಲ್ಲಿ ನೆರವು ನೀಡಲು ಸರ್ಕಾರ ಕ್ರಮ ಕೈಗೊಂಡಿದೆ
Photo Credit : Twitter

ಬೆಂಗಳೂರು: ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಮದುವೆಯಾದ ಪರಿಶಿಷ್ಟ ಜಾತಿ,ಪಂಗಡಕ್ಕೆ ಸೇರಿದ ದಂಪತಿಗೆ ‘ಸರಳ ವಿವಾಹ ಯೋಜನೆ’ ಅಡಿಯಲ್ಲಿ ನೆರವು ನೀಡಲು ಸರ್ಕಾರ ಕ್ರಮ ಕೈಗೊಂಡಿದೆ.

ನೋಂದಾಯಿತ ಸಂಘ-ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು ವ್ಯವಸ್ಥೆ ಮಾಡುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿವಾಹವಾಗುವ ಪರಿಶಿಷ್ಟ ಜಾತಿಯ ದಂಪತಿಗಳಿಗೆ ರೂ.

50,000 ಆರ್ಥಿಕ ನೆರವು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

2015-16ನೇ ಸಾಲಿನ ಆಯವ್ಯಯ ಭಾಷಣದಲ್ಲಿ, ‘ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಸರಳ ವಿವಾಹ ಮಾಡಿಕೊಂಡ ಪ.ಜಾತಿ,ಪಂಗಡದ ದಂಪತಿಗೆ ಸರಳ ವಿವಾಹ ಯೋಜನೆಯಡಿ ಜೀವನೋಪಾಯಕ್ಕಾಗಿ ಸುಮಾರು 50 ಸಾವಿರ ರೂ. ಆರ್ಥಿಕ ನೆರವು ಒದಗಿಸಲಾಗುವುದು,’ ಎಂದು ಸರಕಾರ ಘೋಷಣೆ ಮಾಡಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು