News Kannada
Tuesday, December 06 2022

ಕಲಬುರಗಿ

ಕಲಬುರ್ಗಿಯಲ್ಲಿ ‘ಲೋಕೋಪಯೋಗಿ ಭವನ’ ಲೋಕಾರ್ಪಣೆ ಮಾಡಿದ ಸಿಎಂ ಯಡಿಯೂರಪ್ಪ

Photo Credit :

ಕಲಬುರಗಿ: ಲೋಕೋಪಯೋಗಿ ಇಲಾಖೆಯ ವಿವಿಧ ಹಂತದ ಕಚೇರಿಗಳು ಒಂದೇ ಸೂರಿನಡಿ ಇರಬೇಕೆಂಬ ಪರಿಕಲ್ಪನೆಯಿಂದ 47.10 ಕೋಟಿ ರೂ. ವೆಚ್ಚದಲ್ಲಿ ಆಕರ್ಷಕ ವಾಸ್ತುಶಿಲ್ಪಿಯೊಂದಿಗೆ ಕಲಬುರಗಿ ನಗರದಲ್ಲಿ ನಿರ್ಮಾಣಗೊಂಡಿರುವ “ಲೋಕೋಪಯೋಗಿ ಭವನ” ಸೇರಿದಂತೆ ಕಲಬುರಗಿ ಜಿಲ್ಲೆಯ 181.85 ಕೋಟಿ ರೂ. ಬೃಹತ್ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಚಾಲನೆ ನೀಡಿದರು.

ನೂತನ ಲೋಕೋಪಯೋಗಿ ಭವನದಲ್ಲಿ ಅಯೋಜಿಸಲಾದ ಭವ್ಯ ಕಾರ್ಯಕ್ರಮದಲ್ಲಿ ಲೊಕೋಪಯೋಗಿ, ಸಮಾಜ ಕಲ್ಯಾಣ ಹಾಗೂ ಅರೋಗ್ಯ ಇಲಾಖೆಯ ಒಟ್ಟು 16 ಕಾಮಗಾರಿಗಳಿಗೆ ಅಡಿಗಲ್ಲು, ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆಯನ್ನು ಮುಖ್ಯಮಂತ್ರಿಗಳು ನೆರವೇರಿಸಿದರು.

ಕಲಬುರಗಿ-ಶರಣ ಸಿರಸಗಿ, ಕಲಬುರಗಿ-ರಾಮ ಮಂದಿರ ನಡುವೆ ರೈಲ್ವೆ ರಸ್ತೆ ಮೇಲ್ಸೇತುವೆ ಲೋಕಾರ್ಪಣೆ, ಸಮಾಜ ಕಲ್ಯಾಣ ಇಲಾಖೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ನೂತನ ಕಟ್ಟಡ, ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಗಳ ಉದ್ಘಾಟನೆ ಹಾಗೂ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನೂತನ ಕಟ್ಟಡಗಳ ಉದ್ಘಾಟನೆ ಇಂದು ನೆರವೇರಿಸಲಾಗಿದೆ ಎಂದ ಅವರು ಕಳೆದ 2 ವರ್ಷದಲ್ಲಿ ನೆರೆ ಪ್ರವಾಹ, ಕೋವಿಡ್ ಮಹಾಮಾರಿ ನಡುವೆಯೂ ಅಭಿವೃದ್ಧಿ ಕಾರ್ಯ ನಿರಂತರ ಸಾಗುತ್ತಿದ್ದು, ಈ ಅಭಿವೃದ್ಧಿ ಕಾರ್ಯಗಳು ಸಾಕ್ಷಿಯಾಗಿವೆ. ಸಮಗ್ರ ಕರ್ನಾಟಕದ ನಿರ್ಮಾಣ ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಮುಖ್ಯಮಂತ್ರಿಗಳು ನುಡಿದರು.

ನೀತಿ ಆಯೋಗದ ಸುಸ್ಥಿರ ಅಭಿವೃದ್ಧಿ ಸೂಚ್ಯಂಕದಲ್ಲಿ ರಾಜ್ಯದ ಅಂಕ ಮತ್ತು ಸ್ಥಾನದಲ್ಲಿ ಗಣನೀಯ ಸುಧಾರಣೆಯಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯವನ್ನು ಮೊದಲ ಸ್ಥಾನಕ್ಕೆ ಕೊಂಡೊಯ್ಯುವ ಪ್ರಯತ್ನ ನಿರಂತರ ಸಾಗಿದೆ. ನಿರ್ಮಾಣ ಕಾರ್ಮಿಕರು ವಸತಿ ಸಮಸ್ಯೆಯನ್ನು ಎದುರಿಸುತ್ತಿರುವುದನ್ನು ಮನಗಂಡಿರುವ ಸರ್ಕಾರ ಕಲಬುರಗಿ ಸೇರಿದಂತೆ 10 ಜಿಲ್ಲೆಗಳಲ್ಲಿ ಸುಸಜ್ಜಿತ ತಾತ್ಕಾಲಿಕ ವಸತಿ ಗೃಹ ಸೌಲಭ್ಯವನ್ನು ನಿರ್ಮಾಣ ಮಾಡಲಾಗುತ್ತಿದೆ. ರಾಜ್ಯ ಸರ್ಕಾರದ ವಿವಿಧ ವಸತಿ ಯೋಜನೆಗಳಡಿಯಲ್ಲಿ ರಾಜ್ಯದ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 100 ಮನೆಗಳನ್ನು ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಸಾಮಾಜಿಕ ನ್ಯಾಯ ನೀಡುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ ಪರಿಶಿಷ್ಟ ಜಾತಿಯವರಿಗೆ 3,200.87 ಕೋಟಿ ರೂ.ಗಳು ಹಾಗೂ ಪರಿಶಿಷ್ಟ ಪಂಗಡದವರಿಗೆ 1,270.50 ಕೋಟಿ ವೆಚ್ಚದಲ್ಲಿ ವಿದ್ಯಾರ್ಥಿ ವೇತನ, ವಿದ್ಯಾರ್ಥಿ ನಿಲಯ ನಿರ್ವಹಣೆ, ವಸತಿ ಶಾಲೆ ನಿರ್ವಹಣೆ ಹಾಗೂ ಇತರೆ ಕಾರ್ಯಕ್ರಮಗಳನ್ನು ಅನುμÁ್ಠನ ಮಾಡಿದ್ದು, 11.73 ಲಕ್ಷ ಪರಿಶಿಷ್ಟ ಜಾತಿ ಹಾಗೂ 4.62 ಲಕ್ಷ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಸೌಲಭ್ಯ ಪಡೆದಿದ್ದಾರೆ.

ಕಲ್ಯಾಣ ಕರ್ನಾಟಕ ಅಭಿವೃದಿಗೆ ಸಂಕಲ್ಪ: ಕಲ್ಯಾಣ ಕರ್ನಾಟಕ ಭಾಗದ ಜನತೆಯ ಆಶೋತ್ತರಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ರೂಪಿಸಿದೆ. 2021-22ನೇ ಸಾಲಿಗೆ ಕೆ.ಕೆ.ಅರ್.ಡಿ.ಬಿ. ಮಂಡಳಿಗೆ 1500 ಕೋಟಿ ರೂ. ಅನುದಾನ ಹಂಚಿಕೆ ಮಾಡಿ ಕ್ರಿಯಾ ಯೋಜನೆಗೂ ಅನುಮೋದನೆ ನೀಡಿದೆ. ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ವಲಯಗಳು, ಕೈಗಾರಿಕೆ, ಕೌಶಲ್ಯಾಭಿವೃದ್ಧಿ, ನೀರಾವರಿ, ಕುಡಿಯುವ ನೀರು, ರಸ್ತೆ ಮತ್ತು ಸಂಪರ್ಕ, ಅಂತರ್ಜಲ ಸಂರಕ್ಷಣೆ, ಕೃಷಿ ವಲಯದಲ್ಲಿ ಈ ಅನುದಾನ ವಿನಿಯೋಗಿಸಲಾಗುತ್ತಿದೆ. ಕೋವಿಡ್ ಸಂಕಷ್ಟದ ನಡುವೆಯೂ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಯಾವುದೇ ಅನುದಾನ ಕಡಿತ ಮಾಡಿಲ್ಲ. ಕಲ್ಯಾಣ ಕರ್ನಾಟಕ ಭಾಗದ 6 ಜಿಲ್ಲೆಗಳ ಸರ್ವತೋಮುಖ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಮಾನವ ಸಂಪನೂಲ, ಕೃಷಿ ಹಾಗೂ ಸಾಂಸ್ಕøತಿಕ ಸಂಘವನ್ನು ರಚಿಸಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ನಮ್ಮ ದೃಢ ಸಂಕಲ್ಪವಾಗಿದೆ ಎಂದು ಸಿ.ಎಂ. ಬಿ.ಎಸ್.ಯಡಿಯೂರಪ್ಪ ಹೇಳಿದರು.

See also  ಹಲವಾರು ವರ್ಷಗಳಿಂದ ಘಟಿಸುತ್ತಿರುವ ಭೂಕಂಪ

ಪ್ರಾದೇಶಿಕ ಅಸಮತೋಲನ ನಿವಾರಣೆಗೆ 3000 ಕೋಟಿ ರೂ.: ಪ್ರಾದೇಶಿಕ ಅಸಮತೋಲನ ನಿವಾರಣೆಗೆ ವಿಶೇಷ ಅಭಿವೃದ್ಧಿ ಯೋಜನೆಗಳನ್ನು ಮುಂದುವರೆಸಲು 2021-22ನೇ ಸಾಲಿನಲ್ಲಿ 3,000 ಕೋಟಿ ರೂ. ಗಳನ್ನು ಆಯವ್ಯಯದಲ್ಲಿ ಮೀಸಲಿರಿಸಿದೆ ಎಂದು ತಿಳಿಸಿದ ಸಿ.ಎಂ. ಬಿ.ಎಸ್.ಯಡಿಯೂರಪ್ಪ ಇತ್ತೀಚೆಗμÉ್ಟ ನಡೆದ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ 10 ಕೋಟಿ ರೂ. ಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ. ಅಂತೆಯೇ ಕೂಡಲ ಸಂಗಮ ಅಭಿವೃದ್ಧಿ ಮಂಡಳಿಯ ಸಭೆ ನಡೆಸಿ 94 ಕೋಟಿ ರೂ. ಗಳ ವೆಚ್ಚದಲ್ಲಿ ಕೈಗೊಂಡಿರುವ ಬಸವ ಅಂತರರಾಷ್ಟ್ರೀಯ ಮಟ್ಟದ ವಸ್ತು ಸಂಗ್ರಹಾಲಯ ನಿರ್ಮಾಣವನ್ನು ಚುರುಕುಗೊಳಿಸಲು ಸೂಚಿಸಲಾಗಿದೆ ಎಂದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Related Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು