News Kannada
Saturday, November 26 2022

ಕಲಬುರಗಿ

ಸಾಮೂಹಿಕ ನಕಲು ; ಪರೀಕ್ಷಾ ಕೇಂದ್ರವೇ ರದ್ದು - 1 min read

Photo Credit :

ಕಲಬುರಗಿ, -ಬುಧವಾರ ಬೀದರ್ ನ ಪರೀಕ್ಷಾ ಕೇಂದ್ರಗಳಿಗೆ ದಿಢೀರ ಭೇಟಿ ನೀಡಿದ ಗುವಿವಿ ಕುಲಪತಿ ಪ್ರೊ.ದಯಾನಂದ ಅಗಸರ ಅವರು ಪರೀಕ್ಷಾ ಕೇಂದ್ರದಲ್ಲಿ ಸಾಮೂಹಿಕ ನಕಲು ಹಾಗೂ ಪರೀಕ್ಷಾ ಅಕ್ರಮ ನಡೆಯುತ್ತಿರುವುದನ್ನು ಗಮನಿಸಿ, ಎಂ.ಎಸ್. ಇನ್ಸ್ ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜಮೆಂಟ್ ಕಾಲೇಜಿನ (ಕಾಲೇಜು ಕೋಡ್-ಬಿ574) ಪರೀಕ್ಷಾ ಕೇಂದ್ರವನ್ನು ರದ್ದುಪಡಿಸಿದರು. ರದ್ದುಪಡಿಸಿದ ಸದರಿ ಪರೀಕ್ಷಾ ಕೇಂದ್ರದ ವಿದ್ಯಾರ್ಥಿಗಳು ದಿನಾಂಕ 13-08-2021 ರಿಂದ ಮುಂದಿನ ಎಲ್ಲಾ ಪರೀಕ್ಷೆಗಳನ್ನು ಬರೆಯಲು ಬಿವಿಬಿ ಕಾಲೇಜ್ ಕ್ಯಾಂಪಸ್ ನಲ್ಲಿರುವ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹೊಸ ಪರೀಕ್ಷಾ ಕೇಂದ್ರವನ್ನು ನಿಗದಿಪಡಿಸಲಾಯಿತು. ಪರೀಕ್ಷಾ ಕೇಂದ್ರಕ್ಕೆ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರನ್ನು ಆಂತರಿಕ ಹಿರಿಯ ಮೇಲ್ವಿಚಾರಕರು ಹಾಗೂ ಬಿವಿಬಿ ಕಾಲೇಜಿನ ಪ್ರಾಧ್ಯಾಪಕರೊಬ್ಬರನ್ನು ಬಾಹ್ಯ ಹಿರಿಯ ಮೇಲ್ವಿಚಾರಕರಾಗಿ ನೇಮಕ ಮಾಡುವಂತೆ ಸ್ಥಳದಲ್ಲಿಯೇ ಆದೇಶ ನೀಡಿದರು.

ಅದೇರೀತಿ, ನಗರದ ಕವಿರತ್ನ ಕಾಳಿದಾಸ ಪದವಿ ಮಹಾವಿದ್ಯಾಲಯದಲ್ಲಿಯೂ ಸಹ ಪರೀಕ್ಷಾ ಅಕ್ರಮಗಳು ನಡೆಯುತ್ತಿರುವುದನ್ನು ಗಮನಿಸಿ ಎರಡೂ ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರಿಗೆ ಹಾಗೂ ಬಾಹ್ಯ ಹಿರಿಯ ಮೇಲ್ವಿಚಾರಕರಿಗೆ ಎಚ್ಚರಿಕೆ ನೀಡಿ, ಲಿಖಿತ ವಿವರಣೆ ನೀಡಲು ಕುಲಪತಿಗಳು ಸೂಚಿಸಿದರು.

See also  1 ರಿಂದ 5 ನೇ ತರಗತಿವರೆಗೆ ಶಾಲೆ ಆರಂಭ, ಮಕ್ಕಳಿಂದ ಹಾಗೂ ಪೋಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು