NewsKarnataka
Friday, November 26 2021

ಕಲಬುರಗಿ

ಕಲಬುರಗಿ ಪಾಲಿಕೆ– ಮೈತ್ರಿ ಕುರಿತು ತೀರ್ಮಾನಿಸಿಲ್ಲ: ಎಚ್‌ಡಿಕೆ

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಬೆಂಬಲ ನೀಡುವಂತೆ ಬಿಜೆಪಿ ನಾಯಕರು ಮನವಿ ಮಾಡಿದ್ದಾರೆ. ಆದರೆ, ತಮ್ಮ ಪಕ್ಷ ಮೈತ್ರಿ ಕುರಿತು ಯಾವುದೇ ತೀರ್ಮಾನ ಮಾಡಿಲ್ಲ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಸೋಮವಾರ ರಾತ್ರಿ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆಗೂ ಮೊದಲು ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬಿಜೆಪಿಯವರು ಈಗ ಸಹಕಾರ ಕೇಳುತ್ತಾರೆ. ನಂತರ ನಮ್ಮ ವಿರುದ್ಧವೇ ಮಾತನಾಡುತ್ತಾರೆ. ಅವಶ್ಯಕತೆ ಇದ್ದಾಗ ನಮ್ಮನ್ನು ಬಳಸಿಕೊಂಡು ನಂತರ ದೂರು ವುದು ಬಿಜೆಪಿಯವರ ಲಕ್ಷಣ. ಈ ಕಾರಣ ದಿಂದಾಗಿ ಮೈತ್ರಿ ಕುರಿತು ಯಾವುದೇ ನಿರ್ಧಾರ ಮಾಡಿಲ್ಲ’ ಎಂದರು.

ಜಾತ್ಯತೀತ ಪಕ್ಷಗಳು ಒಂದಾಗಬೇಕು ಎಂದು ಕೆಲವರು ಸಲಹೆ ನೀಡುತ್ತಿದ್ದಾರೆ. ಪಕ್ಷದ ಶಾಸಕರ ಜತೆ ಚರ್ಚಿಸಿದ ಬಳಿಕ ತೀರ್ಮಾನಕ್ಕೆ ಬರಲಾಗುವುದು ಎಂದರು.

ಮಹಾನಗರ ಪಾಲಿಕೆಯ ನಾಲ್ವರು ಜೆಡಿಎಸ್‌ ಸದಸ್ಯರೂ ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗಿದ್ದರು. ಪಕ್ಷದ ಬಹುತೇಕ ಶಾಸಕರು ಸಭೆಯಲ್ಲಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!