News Kannada
Saturday, December 03 2022

ಕಲಬುರಗಿ

ಕಲಬುರಗಿ ಶಾಲೆಗಳಲ್ಲಿ ಮಕ್ಕಳಿಗೆ ಅದ್ಧೂರಿ ಸ್ವಾಗತ

Photo Credit :

ಕಲಬುರಗಿ: ರಾಜ್ಯಾದ್ಯಂತ ಒಂದರಿಂದ ಐದನೇ ತರಗತಿವರೆಗೆ ಶಾಲೆಗಳು ಪ್ರಾರಂಭಗೊಂಡಿದ್ದು, ಜಿಲ್ಲೆಯಲ್ಲಿ ಅದ್ಧೂರಿಯಾಗಿ ಮಕ್ಕಳನ್ನು ಶಾಲೆಗೆ ಬರಮಾಡಿಕೊಳ್ಳಲಾಗಿದೆ.

ಕಲಬುರಗಿಯ ಎಸ್. ಆರ್.ಎನ್. ಮೆಹತಾ ಶಾಲೆಯಲ್ಲಿ ಅದ್ದೂರಿಯಾಗಿ ಮಕ್ಕಳನ್ನು ಶಾಲೆಗೆ ಬರಮಾಕೊಳ್ಳಲಾಗಿದೆ. ಕಲಬುರಗಿ ಜಿಲ್ಲೆಯಲ್ಲಿ 1029 ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಿದ್ದು, 1 ರಿಂದ 5ನೇ ತರಗತಿವರೆಗೆ ಒಟ್ಟು 80,434 ಮಕ್ಕಳ ಸಂಖ್ಯೆ ಇದೆ.

ಈಗಾಗಲೇ ಶಾಲೆ ಕೊಠಡಿಗಳನ್ನು ಸ್ಯಾನಿಟೈಜ್ ಮಾಡಲಾಗಿದ್ದು, ಕೋವಿಡ ನಿಯಮಗಳೊಂದಿಗೆ ಶಾಲೆಗಳನ್ನು ತೆಗೆಯಬೇಕೆಂದು ಶಿಕ್ಷಣ ಇಲಾಖೆ ಸಕಲ ವ್ಯವಸ್ಥೆ ಗಳನ್ನು ಮಾಡಿತ್ತು.

ಒಂದು ಕೊಠಡಿಯಲ್ಲಿ 15-20 ಮಕ್ಕಳ ಆಸಿನಕ್ಕೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಸಾಮಾಜಿಕ ಅಂತರವನ್ನು ಕಾಯ್ದುಕೊಂಡು, ಮಾಸ್ಕ್ ಧರಿಸಿ ಮಕ್ಕಳಿಗೆ ಪಾಠವನ್ನು ಹೇಳಿಕೊಡಲಾಗುತ್ತಿದೆ. ವಾರದಲ್ಲಿ ಸೋಮವಾರದಿಂದ ಶುಕ್ರವಾರ ವಾರದವರೆಗೆ ಐದು ದಿನ ಮಾತ್ರ ಮಕ್ಕಳಿಗೆ ಪಾಠ ಹೇಳಲಾಗುತ್ತಿದೆ.

See also  ಮಾಜಿ ಫುಟ್ ಬಾಲ್ ಆಟಗಾರ ವಿಧಿವಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು