News Kannada
Sunday, December 04 2022

ಬಳ್ಳಾರಿ

ಮಣ್ಣಿನ ಗಣೇಶ ಮೂರ್ತಿಗಳನ್ನು‌ ಬಳಸಿ- ಪ್ರೀತಿ ಗೆಹ್ಲೋಟ್

Photo Credit :

ಬಳ್ಳಾರಿ: ಪ್ರತಿ ವರ್ಷ ಗಣೇಶ ಹಬ್ಬದ‌ ನಂತರ ಮೂರ್ತಿ ವಿಸರ್ಜನೆಯಿಂದಾಗಿ ಜಲ ಮಲಿನಗೊಳ್ಳುತ್ತಿದೆ ಆದ್ದರಿಂದ ಈ ಬಾರಿ ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ.ಓ.ಪಿ)ನಿಂದ ತಯಾರಿಸಿದ ಗಣೇಶ ಮೂರ್ತಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಣ್ಣಿನಿಂದ ತಯಾರಿಸಿದ ಮೂರ್ತಿಗಳನ್ನು ಪೂಜಿಸಿ ನೀರು ಮಲಿನಗೊಳ್ಳುವುದನ್ನು ತಡೆಗಟ್ಟುವ ಸಲುವಾಗಿ
ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ.ಓ.ಪಿ) ಹಾಗೂ ರಾಸಾಯನಿಕ ಬಣ್ಣಗಳ ಲೇಪನದಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಉಪಯೋಗಿಸುವುದನ್ನು ನಿಷೇಧಿಸಿದೆ. ಮಣ್ಣಿನಿಂದ ಹಾಗೂ ನೈಸರ್ಗಿಕ ಬಣ್ಣಗಳಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಪೂಜಿಸಬೇಕು ಎಂದು ಅವರು ತಿಳಿಸಿದ್ದಾರೆ.

ನೀರಿನ ಮೂಲಗಳನ್ನು ಸಂರಕ್ಷಣೆ ಮಾಡಲು ನಗರದಲ್ಲಿ ಹಾದು ಹೋಗುವ ತುಂಗಾಭದ್ರ ಕಾಲುವೆಯಲ್ಲಿ ನಿಗಧಿಪಡಿಸಿದ ಸ್ಥಳಗಳಾದ ಬೆಂಗಳೂರು ರಸ್ತೆ, ತಾಳೂರು ರಸ್ತೆ, ಕಪ್ಪಗಲ್ಲು ರಸ್ತೆ, ಹೊಸಪೇಟೆ ರಸ್ತೆಯ ಅಲ್ಲಿಪುರ, ಬೆಳಗಲ್ಲು ರಸ್ತೆ(ಡಿ.ಸಿ.ನಗರ), ಸಿರುಗುಪ್ಪ ರಸ್ತೆ ಹವಂಭಾವಿ, ಬಂಡಿಹಟ್ಟಿ ಆಲದಹಳ್ಳಿ ರಸ್ತೆ ಹಾಗೂ ಭತ್ರಿ ಸ್ಥಳಗಳಲ್ಲಿಯೇ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಿ ಪರಿಸರ ಸಂರಕ್ಷಿಸಬೇಕೆಂದು ಅವರು ಕೋರಿದ್ದಾರೆ.

See also  ಕೋವಿಡ್ ನಿಯಮ ಉಲ್ಲಂಘಿಸಿ ಪರೀಕ್ಷೆ: 2 ಕಾಲೇಜುಗಳ ವಿರುದ್ಧ ಎಫ್ ಐ ಆರ್ ದಾಖಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು