News Kannada
Friday, January 27 2023

ಬಳ್ಳಾರಿ

ಹೂವಿನಹಡಗಲಿ: ತಾಯಿ ಕೊಂದಿದ್ದ ಮಗನ ಹತ್ಯೆ

Photo Credit :

ಹೂವಿನಹಡಗಲಿ: ಆಸ್ತಿ ಹಂಚಿಕೆ ವಿಚಾರವಾಗಿ ಒಂಬತ್ತು ವರ್ಷಗಳ ಹಿಂದೆ ಹೆತ್ತ ತಾಯಿಯನ್ನು ಕೊಲೆ ಮಾಡಿದ್ದ ವ್ಯಕ್ತಿಯನ್ನು ಗುರುವಾರ ಆತನ ಸಹೋದರನೇ ಹತ್ಯೆಗೈದಿರುವ ಘಟನೆ ತಾಲ್ಲೂಕಿನ ಅಲ್ಲಿಪುರ ಗ್ರಾಮದಲ್ಲಿ ಜರುಗಿದೆ.

ಕುರಿ ಶಿವಪ್ಪ (39) ಕೊಲೆಯಾದವರು. ಈತನ ಕಿರಿಯ ಸಹೋದರ ಕುರಿ ಪಕ್ಕಿರೇಶ (37) ಕೊಲೆ ಆರೋಪಿ.

ಜಮೀನು ಮಾರಾಟದಿಂದ ಬಂದ ಹಣ ಹಂಚಿಕೆ ವಿಚಾರವಾಗಿ ಸಹೋದರರ ನಡುವೆ ಜಗಳ ಉಂಟಾಗಿದೆ. ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಪಕ್ಕಿರೇಶ ತನ್ನ ಅಣ್ಣನ ಮೇಲೆ ಕೊಡಲಿಯಿಂದ ದಾಳಿ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಶಿವಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಆಸ್ತಿಗಳನ್ನು ಸಮನಾಗಿ ಹಂಚಿಕೆ ಮಾಡಿಲ್ಲ ಎಂದು ಈಗ ಕೊಲೆಯಾಗಿರುವ ಶಿವಪ್ಪ 9 ವರ್ಷಗಳ ಹಿಂದೆ ತನ್ನ ತಾಯಿ ಸೋಮವನನ್ನು ಕೊಲೆ ಮಾಡಿ ಜೈಲು ಸೇರಿದ್ದ. ಎರಡು ವರ್ಷಗಳ ಹಿಂದೆ ಜಾಮೀನಿನ ಮೇಲೆ ಬಿಡುಗಡೆಯಾಗಿ ಸಹೋದರನ ಮನೆಯಲ್ಲೇ ವಾಸವಾಗಿದ್ದ. ಇಂದು ಬೆಳಿಗ್ಗೆ ಮತ್ತೆ ಆಸ್ತಿ ವಿಚಾರವಾಗಿ ಸಹೋದರರ ನಡುವೆ ಏರ್ಪಟ್ಟ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ.

ಆರೋಪಿ ಪಕ್ಕಿರೇಶನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಸಿಪಿಐ ರಮೇಶ ಕುಲಕರ್ಣಿ, ಪಿಎಸ್ಐ ದಾದಾವಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಹಿರೇಹಡಗಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ವಿಚಾರಕ್ಕೆ ನಮ್ಮ ವಿರೋಧವಿಲ್ಲ: ಮಾಜಿ ಸಚಿವ ಯುಟಿ.ಖಾದರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು