ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್ ಫೇಲ್ ಆಗಿ ಪಲ್ಟಿಯಾಗಿರುವ ಘಟನೆ ಸಂಭವಿಸಿದ್ದು, ಘಟನೆಯಲ್ಲಿ 8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಿಂಧನೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಸಿರಗುಪ್ಪ ತಾಲೂಕಿನ ಬೈರಾಪುರ ಕ್ರಾಸ್ ಬಳಿ ಬರುತ್ತಿದ್ದಂತೆ ಬಸ್ ಬ್ರೇಕ್ ಫೇಲ್ ಆಗಿ ಈ ದುರ್ಘಟನೆ ಸಂಭವಿಸಿದೆ. 8 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.