NewsKarnataka
Thursday, November 25 2021

ಬೀದರ್

ಬೀದರ್: ಕೆರೆಯಲ್ಲಿ ಈಜಲು ಹೋಗಿದ್ದ 4 ಜನ ಯುವಕರು ನೀರಲ್ಲಿ ಮುಳುಗಿ ಮೃತ

ಬೀದರ್: ಜಿಲ್ಲೆಯ ಹುಮನಾಬಾದ್ ತಾಲೂಕಿನ ಘೋಡವಾಡಿ ಗ್ರಾಮದ ಇಸ್ಮಾಯಿಲ್ ಖಾದ್ರಿ ದರ್ಗಾ ಬಳಿ ಇರುವ ಕೆರೆಯಲ್ಲಿ ಈಜಲು ಹೋಗಿದ್ದ 4 ಜನ ಯುವಕರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಸಂಭವಿಸಿದೆ.

ಭಾನುವಾರ ಘೋಡವಾಡಿಯ ಇಸ್ಮಾಯಿಲ್ ಖಾದ್ರಿ ದರ್ಗಾಕ್ಕೆ ಆಗಮಿಸಿದ್ದ ನೆರೆಯ ತೆಲಂಗಾಣದ ಹೈದ್ರಾಬಾದನ ಬೊರಾಬಂಡಾ ನಿವಾಸಿಗಳಾದ ಸೈಯದ್ ಅಕ್ಬರ್ ಸೈಯದ್ ಉಸ್ಮಾನ್ (17), ಮಹಮದ್ ಜುಲೇದ್ ಖಾನ್( 19), ಮಹಮದ್ ಫಾದಖಾನ್ ಸಲೀಂ ಖಾನ್ (18) ಮತ್ತು ಸೈಯದ್ ಜುನೇದ್ ಸೈಯದ್ ಖಾಲೆದ್ (15) ಈಜಲು ಹೋದವರು ಮೇಲಕ್ಕೆ ಬರಲಾಗದೇ ನೀರುಪಾಲಾದರೆಂದು ತಿಳಿದುಬಂದಿದೆ.

4 ಜನ ಯುವಕರ ಪೈಕಿ ಸೈಯದ್ ಅಕ್ಬರ್ ಎಂಬುವವನ ಶವ ಪತ್ತೆಯಾಗಿದ್ದು, ಉಳಿದವರ ಶವಗಳಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ.

ಘಟನೆಯ ಕುರಿತು ತಿಳಿಯುತ್ತಿದ್ದಂತೆ ಹುಮನಾಬಾದ್ ಪೊಲೀಸ್ ಠಾಣೆಯ ಪಿಎಸ್ಐ ರವಿಕುಮಾರ್ ನಾಯ್ಕೋಡಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳಿಯರ ಸಹಾಯದಿಂದ ನೀರಲ್ಲಿ ಮುಳುಗಿದ ಶವಗಳ ಪತ್ತೆಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ ಈ ಕುರಿತು ಹುಮನಾಬಾದ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!