News Kannada
Monday, January 30 2023

ಬೀದರ್

ಬೀದರ್: ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

A prostitution racket was attacked
Photo Credit :

ಬೀದರ್​: ಹಾಡಹಗಲೇ ಅಂಗಡಿಗೆ ನುಗ್ಗಿ ಯುವಕನನ್ನು ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಸಿಂಗಾರ್​ ಬಾಗ್​ನಲ್ಲಿ ನಡೆದಿದೆ.

ಸಿಂಗಾರಬಾಗ್ ನಿವಾಸಿ 20 ವರ್ಷದ ಅಮೀರ್ ಖಾನ್ ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ನೂರ್ ಖಾನ್ ತಾಲಿಬ್ ನಿವಾಸಿ ಜೀಷನ್ ಎಂಬಾತ ಕೊಲೆ ಮಾಡಿದ ಆರೋಪಿ.

ನೂರ್ ಖಾನ್ ತಾಲಿಬ್ ನಿವಾಸಿ ಜೀಷನ್ ಸಹೋದರಿಯನ್ನು ಅಮೀರ್​ ಖಾನ್​ ಪ್ರೀತಿಸುತ್ತಿದ್ದ ಎಂದು ತಿಳಿದು ಬಂದಿದೆ. ಮಂಗಳವಾರ ಬೆಳಗ್ಗೆ ಅಮೀರ್​ ಖಾನ್​ ಕೆಲಸ ಮಾಡುತ್ತಿದ್ದ ಅಂಗಡಿಗೆ ತೆರಳಿ ಮನಸೋಇಚ್ಛೆ ಚಾಕುವಿನಿಂದ ದಾಳಿ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಅಮೀರ್​ ಖಾನ್​ ಸಾವನ್ನಪ್ಪಿದ್ದಾನೆ

ಯುವಕನ ಕೊಲೆ ಮಾಡುತ್ತಿರುವ ದೃಶ್ಯಗಳು ಅಂಗಡಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗ್ತಿದೆ. ಈ ಘಟನೆ ಸಂಬಂಧ ಮೃತ ಅಮೀರ್ ಖಾನ್​ ಪೋಷಕರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಜೀಷನ್​ನನ್ನು ಬಂಧಿಸಿ ಹೆಚ್ಚಿನ ವಿಚಾರಣೆ ಕೈಗೊಂಡಿದ್ದಾರೆ.

See also  ಪಣಜಿ: ಪತ್ನಿಯನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿ ಕೊಲೆ ಮಾಡಿದ ಪತಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು