News Kannada
Saturday, January 28 2023

ಬೀದರ್

ಬೀದರ್‌ ಉತ್ಸವ ರಾಜ್ಯಕ್ಕೆ ಮಾದರಿ ಆಗಲಿ ಎಂದ ಭಗವಂತ ಖೂಬಾ

May Bidar festival be a model for the state, says Lord Khooba
Photo Credit : News Kannada

ಬೀದರ್‌: ‘ಬೀದರ್‌ ಉತ್ಸವ ರಾಜ್ಯದ ಮಾದರಿ ಉತ್ಸವವಾಗಬೇಕು. ಕಲಾವಿದರು ರಾಜ್ಯದ ಜನತೆ ಸ್ಮರಿಸುವ ರೀತಿಯಲ್ಲಿ ಕಾರ್ಯಕ್ರಮ ನೀಡಬೇಕು’ ಎಂದು ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದರು.

ಇಲ್ಲಿಯ ಕೋಟೆ ಆವರಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿರುವ ಬೀದರ್ ಉತ್ಸವಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.

2005ರಲ್ಲಿ ಬೀದರ್‌ ಉತ್ಸವ ಆರಂಭವಾಗಿದೆ. ಕಾರಣಾಂತರಗಳಿಂದ ಅನೇಕ ವರ್ಷ ಉತ್ಸವ ನಡೆದಿರಲಿಲ್ಲ. ಜನರ ಬೇಡಿಕೆ ಹಾಗೂ ಜನಪ್ರತಿನಿಧಿಗಳ ಒಮ್ಮತದ ಅಭಿಪ್ರಾಯದ ಮೇರೆಗೆ ಈ ವರ್ಷ ಮತ್ತೆ ಉತ್ಸವ ಆರಂಭಿಸಲಾಗಿದೆ. ಜಿಲ್ಲಾಡಳಿತದ ಅಧಿಕಾರಿಗಳು ಒಂದು ತಿಂಗಳಿಂದ ಕಷ್ಟಪಟ್ಟು ಸಿದ್ಧತೆ ಮಾಡಿಕೊಂಡಿದ್ದಾರೆ. ಜನರು ಉತ್ಸವವನ್ನು ಯಶಸ್ವಿಗೊಳಿಸಬೇಕು’ ಎಂದು ಮನವಿ ಮಾಡಿದರು.

ಪಶು ಸಂಗೋ‍‍ಪನೆ ಸಚಿವ ಪ್ರಭು ಚವಾಣ್ ಮಾತನಾಡಿ, ”ಬೀದರ್‌ ಜಿಲ್ಲೆಯಲ್ಲಿ ಅನೇಕ ಐತಿಹಾಸಿಕ ಸ್ಮಾರಕಗಳು ಇವೆ. ಅವುಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ತಿಳಿಸಿದರು.

ಶಾಸಕ ರಹೀಂ ಖಾನ್, ಬುಡಾ ಅಧ್ಯಕ್ಷ ಬಾಬು ವಾಲಿ ಮಾತನಾಡಿದರು. ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ, ರಾಜ್ಯ ಹಜ್‌ ಸಮಿತಿ ಅಧ್ಯಕ್ಷ ರೌಫೋದ್ದಿನ್‌ ಕಚೇರಿವಾಲೆ, ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ. ಕಿಶೋರ ಬಾಬು, ಬಿಜೆಪಿ ಮುಖಂಡರಾದ ಸೂರ್ಯಕಾಂತ ನಾಗಮಾರಪಳ್ಳಿ. ಗುರುನಾಥ ಕೊಳ್ಳೂರ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.

ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸ್ವಾಗತಿಸಿದರು. ಅನುಪಮ ಭಟ್‌ ನಿರೂಪಣೆ ಮಾಡಿದರು. ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಎಂ, ವಂದಿಸಿದರು

See also  ಅಡುಗೆ ಎಣ್ಣೆ ಬೆಲೆ ಶೇ. 80 ರಷ್ಟು ಏರಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು