News Kannada
Monday, January 30 2023

ಬೀದರ್

ಹುಮನಾಬಾದ್: ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಿರಂತರ ಶ್ರಮ

Humanabad: Continuous efforts are being made for the overall development of the constituency
Photo Credit : News Kannada

ಹುಮನಾಬಾದ್: ‘ಪಟ್ಟಣ ಸೇರಿ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಲಾಗುತ್ತಿದೆ’ ಎಂದು ಶಾಸಕ ರಾಜಶೇಖರ ಪಾಟೀಲ ಹೇಳಿದರು.

ಪಟ್ಟಣದಲ್ಲಿ ನಗರೋತ್ಥಾನ ಯೋಜನೆಯ ₹5.7 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಕಾಮಗಾರಿಗಳು ಗುಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳಬೇಕು. ಶಾಶ್ವತ ಕುಡಿಯುವ ನೀರಿನ ಯೋಜನೆ ಜಾರಿ ಮಾಡಿದರೂ ಪಟ್ಟಣದ ನಾಗರಿಕರಿಗೆ ಸಮಯಕ್ಕೆ ಸರಿಯಾಗಿ ನೀರು ಸಿಗದಿರುವುದು ಬೇಸರದ ಸಂಗತಿ ಎಂದರು.
ಬೀದರ್ ಉತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆಗೆ ಬಿಎಸ್‌ಎಸ್‌ಕೆ ಕಾರ್ಖಾನೆ ಕುರಿತು ಚರ್ಚಿಸಿದ್ದೇನೆ. ಅದಕ್ಕೆ ಮುಖ್ಯಮಂತ್ರಿಗಳು ಸಹ ಶಾಶ್ವತ ಪರಿಹಾರ ಕಲ್ಪಿಸುವ ಭರವಸೆ ನೀಡಿದ್ದಾರೆ ಎಂದರು.

ತಿರುಗೇಟು: ಪಂಚರತ್ನ ಯಾತ್ರೆ ವೇಳೆ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ನೀಡಿದ್ದ,’ಬಸವರಾಜ ಪಾಟೀಲ ಹಾಗೂ ಶಾಸಕ ರಾಜಶೇಖರ ಪಾಟೀಲ ಅವರನ್ನು ಗೆಲ್ಲಿಸಿದ್ದೇನೆ. ಹೀಗಾಗಿ ನನ್ನ ಉಪಕಾರ ನಿಮ್ಮ ಮೇಲೆ ಇದೆ. ನನ್ನ ಮಗನಿಗಾಗಿ ಕ್ಷೇತ್ರ ತ್ಯಜಿಸಿದರೆ ನಿಜವಾದ ಶರಣರಾಗುತ್ತೀರಿ ಎನ್ನುವ ಹೇಳಿಕೆಗೆ ಪ್ರತಿಕ್ರಿಯಿಸಿದ ಶಾಸಕ ರಾಜಶೇಖರ ಪಾಟೀಲ,’ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಎಲ್ಲಿ ಬೇಕಾದರೂ ಚುನಾವಣೆಗೆ ಸ್ಪರ್ಧೆಸುವ ಹಕ್ಕು ಇದೆ. ಆದರೆ ಸುಳ್ಳು ಮಾತುಗಳನ್ನು ಹೇಳಿ ಮತದಾರರ ದಾರಿ ತಪ್ಪಿಸುವ ಕೆಲಸ ಮಾಡಬಾರದು. ಚುನಾವಣೆ ಎದುರಿಸಿ ಗೆಲ್ಲಿ’ ಎಂದು ಅವರು ಹೇಳಿದರು.

ಟಿಎಪಿಸಿಎಂಎಸ್ ಅಧ್ಯಕ್ಷ ಅಭಿಷೇಕ ಪಾಟೀಲ‌, ಪುರಸಭೆ ಅಧ್ಯಕ್ಷರಾದ ನೀತು ಶರ್ಮಾ, ಉಪಾಧ್ಯಕ್ಷೆ ಸತ್ಯವತಿ ಮಠಪತಿ, ಹಳ್ಳಿಖೇಡ ಬಿ. ಪುರಸಭೆ ಅಧ್ಯಕ್ಷ ನಾಗರಾಜ ಹಿಬಾರೆ, ಮುಖ್ಯಾಧಿಕಾರಿ ಶಿವರಾಜ ರಾಠೋಡ, ಸದಸ್ಯರಾದ ಅಫ್ಸರ್ ಮಿಯ್ಯಾ, ಗೋರೆ ಮಿಯ್ಯಾ, ಸುನಿಲ ಪಾಟೀಲ, ರಮೇಶ ಕಲ್ಲೂರ ಸೇರಿದಂತೆ ಸದಸ್ಯರು ಇದ್ದರು.

See also  ದೇಶದಲ್ಲಿ 100 ಕೋಟಿ ಲಸಿಕೆ: ಶ್ರಮಿಸಿದ ವೈದ್ಯಾಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಸನ್ಮಾನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು